Job Description: * ಮಾರ್ಚ್ 22 ರಂದು ರಾಷ್ಟ್ರಪತಿ ದೌಪದಿ ಮುರ್ಮು ರವರು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಸೇರಿದಂತೆ 54 ಗಣ್ಯರಿಗೆ 'ಪದ್ಮ' ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು.* ಇತ್ತೀಚೆಗೆ ನಿಧನರಾದ ಉದ್ಯಮಿ ರಾಕೇಶ್ ಜುಂಜನವಾಲಾ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಮೂವರಿಗೆ ಪದ್ಮವಿಭೂಷಣ, ನಾಲ್ವರಿಗೆ ಪದ್ಮಭೂಷಣ ಹಾಗೂ 47 ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.* ಜನವರಿ 25 ರಂದು 106 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿತ್ತು. ಉಳಿದ 52 ಗಣ್ಯರಿಗೆ ಮತ್ತೊಂದು ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.* ಪದ್ಮವಿಭೂಷಣಕ್ಕೆ 6 ಜನ, ಪದ್ಮಭೂಷಣಕ್ಕೆ 9 ಸಾಧಕರು, ಪದ್ಮಶ್ರೀಗೆ 91 ಸಾದಕರನ್ನು ಆಯ್ಕೆ ಮಾಡಲಾಗಿತ್ತು.