Job Description: * ಕೇಂದ್ರ ಸರ್ಕಾರವು ಇತ್ತೀಚಿಗೆ ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆಯಾದವರ ಹೆಸರನ್ನು ಪ್ರಕಟಿಸಿದ್ದು, ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಸೇರಿ ಒಟ್ಟು ಆರು ಜನರನ್ನು ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. * ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಹಾಗೂ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ರವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕದ ಐದು ಜನರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.* ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಿಂದ ಡಾ.ಖದರ್ ವಲ್ಲಿ ದುಡಿಕುಲ್ಲಾ, ನೃತ್ಯದ ಮೂಲಕ ಕೊಡವ ಸಂಸ್ಕೃತಿಯನ್ನು ಪಸರಿಸಲು ಶ್ರಮಿಸಿದ ಕರ್ನಾಟಕ ಕೊಡುವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷೆ ರಾಣಿ ಮಾಚಯ್ಯ, ತಮಟೆಯ ತಂದೆಯೆಂದು ಪ್ರಖ್ಯಾತರಾದ ಚಿಕ್ಕಬಳ್ಳಾಪುರದ ಪಿಂಡಿ ಪಾಪನಹಳ್ಳಿ ಮುನಿವೆಂಕಟಪ್ಪ, ಬೀದರ್ ನ ಕಲಾವಿದ ಷಾ ರಶೀದ್ ಅಹ್ಮದ್ ಖಾದ್ರಿ, ಪುರಾತತ್ವ ಶಾಸ್ತ್ರಜ್ಞ ಎಸ್.ಸುಬ್ಬರಾಮನ್ ಇವರುಗಳು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದವರಾಗಿದ್ದರೆ.