* ಭಾರತವು ವಿಶ್ವದ ಮೂರನೇ ಅತಿ ದೊಡ್ಡ ಎಥೆನಾಲ್ ಉತ್ಪಾದಕ ಮತ್ತು ಗ್ರಾಹಕ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.* ಜೈವಿಕ ಇಂಧನಗಳ ಬಳಕೆಯನ್ನು ಉತ್ತೇಜಿಸಲು ಮತ್ತು ಇಂಧನ ಸುಸ್ಥಿರತೆಯನ್ನು ಸುಧಾರಿಸಲು ಭಾರತ ಸರ್ಕಾರವು ಕೈಗೊಂಡ ಕ್ರಮಗಳಿಂದಾಗಿ ಎಥಿನಾಲ್ ಉತ್ಪಾದನೆ ಮತ್ತು ಬಳಕೆ ಎರಡರಲ್ಲೂ ಹೆಚ್ಚಳವಾಗಿದೆ.* ದೇಶದಲ್ಲಿ ಸಕ್ಕರೆ ಉತ್ಪಾದನೆ ಕುರಿತು ಮಾತನಾಡಿದ ಸಚಿವರು, ಕಳೆದ ದಶಕದಲ್ಲಿ ಕಬ್ಬು ಬೆಳೆಯುವುದು ಸುಮಾರು 18 ಪ್ರತಿಶತದಷ್ಟು ಹೆಚ್ಚಿದ್ದರೆ, ಕಬ್ಬು ಉತ್ಪಾದನೆಯು 40 ಪ್ರತಿಶತದಷ್ಟು ಹೆಚ್ಚಾಗಿದೆ.* ಕಬ್ಬು ಬೆಳೆಯುವ ರೈತರಿಗೆ ಆರ್ಥಿಕ ನೆರವು ಸೇರಿದಂತೆ ಸರಕಾರವು ಹಲವಾರು ಉಪಕ್ರಮಗಳನ್ನು ಆರಂಭಿಸಿದೆ. ಈ ನೀತಿಗಳು ಇಂಧನಗಳೊಂದಿಗೆ ಮಿಶ್ರಣ ಮಾಡಲು ಹೆಚ್ಚು ಎಥೆನಾಲ್ ಲಭ್ಯವಾಗುವಂತೆ ಮಾಡಲು, ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ರೈತರಿಗೆ ಬೆಂಬಲ ನೀಡುತ್ತವೆ.* ಹಸಿರು ಹೈಡ್ರೋಜನ್ ಉತ್ಪಾದನೆ, ಬಳಕೆ ಮತ್ತು ರಫ್ತಿಗೆ ಭಾರತವನ್ನು ಜಾಗತಿಕ ಕೇಂದ್ರವನ್ನಾಗಿ ಮಾಡಲು ಸರ್ಕಾರವು ಕಳೆದ ವರ್ಷ 19 ಸಾವಿರ 744 ಕೋಟಿ ರೂಪಾಯಿಗಳ ವೆಚ್ಚದಲ್ಲಿ ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅನ್ನು ಪ್ರಾರಂಭಿಸಿದೆ ಎಂದು ಶ್ರೀ ಜೋಶಿ ಹೇಳಿದರು.