* ಗಾಜಾದಲ್ಲಿ ಭದ್ರತಾ ಮಂಡಳಿಯ ಸದಸ್ಯರು ಸೇರಿದಂತೆ ಅನೇಕ ರಾಷ್ಟ್ರಗಳ ಬೆಂಬಲದೊಂದಿಗೆ  ಮಾನವೀಯ ನೆಲೆಯಲ್ಲಿ ತಕ್ಷಣ ಕದನ ವಿರಾಮ ಘೋಷಿಸುವ ಭದ್ರತಾ ಮಂಡಳಿಯ ನಿರ್ಣಯಕ್ಕೆ ಅಮೆರಿಕ ವಿಟೊ ಅಧಿಕಾರ ಚಲಾಯಿಸಿದೆ. * ಭದ್ರತಾ ಮಂಡಳಿಯ 15 ಸದಸ್ಯ ರಾಷ್ಟ್ರಗಳ ಪೈಕಿ 13 ದೇಶಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ, ಬ್ರಿಟನ್ ಮತದಾನದಿಂದ ದೂರ ಉಳಿದಿದೆ. * ಅಕ್ಟೋಬರ್ .7ರಂದು ಹಮಾಸ್ ನಡೆಸಿದ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಸುಮಾರು 1,200 ಮಂದಿ ಮೃತಪಟ್ಟಿದ್ದರು. ಇಸ್ರೇಲ್ ನಡೆಸಿದ ಮಿಲಿಟರಿ ಕಾರ್ಯಾ ಚರಣೆಯಲ್ಲಿ 17,400ಕ್ಕೂ ಹೆಚ್ಚು ಮಂದಿ ಸಾವಿಗೀಡಾ ಗಿದ್ದು, 40 ಸಾವಿರ ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ಟೀನ್ ಆರೋಗ್ಯ ಸಚಿವಾಲಯ ತಿಳಿಸಿದೆ.