* ಮಕ್ಕಳಲ್ಲಿ ಕಲಿಕಾ ಆಸಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವತಿಯಿಂದ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ 'ಓದುವ ಬೆಳಕು' ಎಂಬ ಹೊಸ ಕಾರ್ಯಕ್ರಮ ಆರಂಭಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.* ಶಾಲಾ ಮಕ್ಕಳನ್ನು ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳನ್ನು ಕಲಿಕಾ ಕೇಂದ್ರಕ್ಕೆ ಕರೆತರುವ ಹಾಗೂ ಈ ಪ್ರಕ್ರಿಯೆಯನ್ನು ನಿರಂತರವಾಗಿಸುವ ಗುರಿ ಹೊಂದಲಾಗಿದೆ.