* ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಪಕ್ಷ ಸಂಘಟನೆ ಉದ್ದೇಶದಿಂದ ಬೆಂಗಳೂರು ನಗರ ವ್ಯಾಪ್ತಿಯ ಸಚಿವರನ್ನು ಉಸ್ತುವಾರಿಗಳನ್ನಾಗಿ ನೇಮಿಸುವ ಆದೇಶ ಹೊರಡಿಸಿದ್ದಾರೆ.ಆದೇಶದ ಪ್ರಕಾರ,* ಬೆಂಗಳೂರು ಪೂರ್ವ ನಗರಪಾಲಿಕೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ,* ಬೆಂಗಳೂರು ಪಶ್ಚಿಮಕ್ಕೆ ಸಚಿವ ಬೈರತಿ ಸುರೇಶ್* ಬೆಂಗಳೂರು ಉತ್ತರಕ್ಕೆ ಸಚಿವ ಕೆ.ಜೆ. ಜಾರ್ಜ್* ಬೆಂಗಳೂರು ದಕ್ಷಿಣಕ್ಕೆ ಸಚಿವ ರಾಮಲಿಂಗಾ ರೆಡ್ಡಿ* ಬೆಂಗಳೂರು ಕೇಂದ್ರಕ್ಕೆ ಸಚಿವ ದಿನೇಶ್ ಗುಂಡೂರಾವ್ ಮತ್ತು ಜಮೀರ್ ಅಹಮದ್ ಖಾನ್ ಅವರನ್ನು ನೇಮಿಸಲಾಗಿದೆ.* ಈ ಸಂಬಂಧ ಸಚಿವರಿಗೆ ಬರೆದ ಪತ್ರದಲ್ಲಿ, ಈಗಾಗಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ಅದರ ಭಾಗವಾಗಿ 5 ನಗರಪಾಲಿಕೆಗಳನ್ನು ವಿಂಗಡಿಸಿರುವುದಾಗಿ ಉಪಮುಖ್ಯಮಂತ್ರಿ ತಿಳಿಸಿದ್ದಾರೆ.* ಮುಂಬರುವ ನಗರಪಾಲಿಕೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಉಸ್ತುವಾರಿ ಸಚಿವರು ತಮ್ಮ ಪಾಲಿಕೆಯ ವ್ಯಾಪ್ತಿಯ ಶಾಸಕರು, ಸಂಸದರು, ಮಾಜಿ ಸದಸ್ಯರು, ಪಕ್ಷದ ಘಟಕಗಳ ಅಧ್ಯಕ್ಷರು ಹಾಗೂ ಇತರ ಮುಖಂಡರೊಂದಿಗೆ ಚರ್ಚಿಸಿ ಪಕ್ಷ ಸಂಘಟನೆ ಬಲಪಡಿಸಿ ಯಶಸ್ಸು ಸಾಧಿಸುವಂತೆ ಸೂಚನೆ ನೀಡಲಾಗಿದೆ.