* ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಗೃಹ ಆರೋಗ್ಯ’ ಯೋಜನೆಯನ್ನು ಜಾರಿಗೊಳಿಸಲು ಅಗತ್ಯವಾದ ಔಷಧಿ ಮತ್ತು ಉಪಕರಣಗಳ ಖರೀದಿಗೆ 185.74 ಕೋಟಿ ರೂ. ಅನುದಾನ ಬಳಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.* ಕೋಲಾರದಲ್ಲಿ ಯಶಸ್ವಿಯಾಗಿ ಜಾರಿಯಾದ ನಂತರ, ಈ ಯೋಜನೆಯನ್ನು ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದ ಇತರ ಜಿಲ್ಲೆಗಳಿಗೆ ವಿಸ್ತರಿಸಲಾಗುತ್ತಿದೆ.* ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದಂತೆ, ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ 30 ವರ್ಷ ಮೇಲ್ಪಟ್ಟವರನ್ನು ಆಯುಷ್ಮಾನ್ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆಗಾಗಿ ಪ್ರೋತ್ಸಾಹಿಸಲಿದ್ದಾರೆ.* ರಕ್ತದೊತ್ತಡ, ಶುಗರ್, ಕ್ಯಾನ್ಸರ್ ಸೇರಿದಂತೆ 14 ಅಸಾಂಕ್ರಾಮಿಕ ರೋಗಗಳ ತಪಾಸಣೆ ನಡೆಯಲಿದೆ. ರೋಗಿಗಳ ಮನೆಗೂ ಔಷಧಿ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ.* ಈ ತಪಾಸಣೆಯು ರೋಗಗಳನ್ನು ಶೀಘ್ರ ಪತ್ತೆಹಚ್ಚಿ, ಗಂಭೀರ ಸ್ಥಿತಿಗೆ ಹೋಗದಂತೆ ತಡೆಯುವಲ್ಲಿ ಸಹಕಾರಿ ಆಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.