* ಕರ್ನಾಟಕ ರಾಜ್ಯ ಸರ್ಕಾರದ ಬಹು ನಿರೀಕ್ಷಿತ ‘ಗೃಹ ಲಕ್ಷ್ಮಿ’ ಯೋಜನೆಗೆ ಮೈಸೂರಿನಲ್ಲಿ ಬುಧವಾರ (ಆ.30) ಚಾಲನೆ ದೊರೆಯಲಿದೆ.  * ಕರ್ನಾಟಕ ರಾಜ್ಯ ಸರಕಾರದ ಗೃಹ ಲಕ್ಷ್ಮಿ ಯೋಜನೆಯು ಒಂದು ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ತಿಂಗಳಿಗೆ ರೂ.2000 ಆರ್ಥಿಕ ನೆರವು ನೀಡಲು ಪ್ರಾರಂಭಿಸಲಾದ ಪರಿಣಾಮಕಾರಿ ಯೋಜನೆಯಾಗಿದೆ.* ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್‌ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ 1.5 ಲಕ್ಷ ಮಹಿಳೆಯರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.* ಈ ಗೃಹ ಲಕ್ಷ್ಮಿ ಕಾರ್ಯಕ್ರಮಕ್ಕೆಂದು ಅರಮನೆ ಮಾದರಿ ಪ್ರವೇಶ ದ್ವಾರ ನಿರ್ಮಿಸಿದ್ದು, ವೇದಿಕೆಯಲ್ಲಿ 140 ಅಡಿ ಉದ್ದದ ಎಲ್ ಇಡಿ ಪರದ ಅಳವಡಿಸಲಾಗಿದೆ. * ಈ ಸಮಾವೇಶಕ್ಕೆ ಜನರನ್ನು ಕರೆತರಲು ಸರ್ಕಾರವೇ ಸುಮಾರು 2 ಸಾವಿರ ಬಸ್‌ಗಳ ವ್ಯವಸ್ಥೆ ಮಾಡಿದೆ.