* ಅರಣ್ಯ ಇಲಾಖೆ Wild Life Trust of India (WTI) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಗರುಡಾಕ್ಷಿ ಆನ್ಲೈನ್ ಡಿಜಿಟಲ್ FIR ವ್ಯವಸ್ಥೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಜನವರಿ 07 ರಂದು (ಮಂಗಳವಾರ) ಚಾಲನೆ ನೀಡಿದರು.* ಅರಣ್ಯ ಅತಿಕ್ರಮಣ, ಅಕ್ರಮ ಮರ ಕಡಿಯುವಿಕೆ, ಬೇಟೆಯಾಡುವಿಕೆ ಮತ್ತು ಅರಣ್ಯ ಪ್ರದೇಶಗಳಿಗೆ ಅನಧಿಕೃತ ಪ್ರವೇಶವನ್ನು ತಡೆಯಲು ಅರಣ್ಯ ಇಲಾಖೆಯು 'ಗರುಡಾಕ್ಷಿ' ಆನ್ಲೈನ್ ಎಫ್ಐಆರ್ ವ್ಯವಸ್ಥೆಯನ್ನು ಪ್ರಾರ೦ಭಿಸಿದೆ.* ಪ್ರಸ್ತುತ ಗರುಡಾಕ್ಷಿ ತಂತ್ರಾಂಶವನ್ನು ಪ್ರಾಯೋಗಿಕವಾಗಿ ಬೆಂಗಳೂರು ನಗರ ವಿಭಾಗ, ಬೆಂಗಳೂರು ಅರಣ್ಯ ಸಂಚಾರಿ ದಳ ವಿಭಾಗ, ಭದ್ರಾವತಿ ವಿಭಾಗ, ಶಿರಸಿ ವಿಭಾಗ ಮತ್ತು ಮಲೈ ಮಹದೇಶ್ವರ ವನ್ಯ ಜೀವಿ ವಿಭಾಗಗಳಲ್ಲಿ ಪ್ರಾಯೋಗಿಕವಾಗಿ (Pilot) ಜಾರಿಗೊಳಿಸಲಾಗುತ್ತದೆ.* ಈ ತಂತ್ರಾಂಶದ ಕಾರ್ಯನಿರ್ವಹಣೆಯ ಬಗ್ಗೆ ಕ್ಷೇತ್ರ ಮಟ್ಟದ ಪ್ರತಿಕ್ರಿಯೆ ಆಧಾರದ ಮೇಲೆ ಇನ್ನೂ ಹೆಚ್ಚು ಕ್ರಿಯಾಶೀಲಗೊಳಿಸಿ ಹಂತ ಹಂತವಾಗಿ ರಾಜ್ಯದ ಎಲ್ಲ ವಿಭಾಗಕ್ಕೂ ವಿಸ್ತರಿಸಲಾಗುವುದು ಮತ್ತು ಆಫ್.ಐ.ಆರ್. ಅನ್ನೂ ಗರುಡಾಕ್ಷಿ ತಂತ್ರಾಂಶದ ಮೂಲಕವೇ ದಾಖಲಿಸುವುದನ್ನು ಕಡ್ಡಾಯಗೊಳಿಸಲಾಗುವುದು.