* ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ಜುಲೈ 2 ರಂದು ಆಯೋಜಿಸಿದ್ದ ಧಾರ್ಮಿಕ ಸತ್ಸಂಗದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 116 ಮಂದಿ ಮೃತಪಟ್ಟು ಹಲವಾರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆ ಅಧಿಕವಾಗಿದೆ.   * ಈ ಧಾರ್ಮಿಕ ಸತ್ಸಂಗಕ್ಕೆ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳು ಹಾಗೂ ನೆರೆಯ ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದರು ಎಂದು ತಿಳಿದುಬಂದಿದೆ.* ಇನ್ನು ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು, ಕಾರ್ಯಕ್ರಮದ ಆಯೋಜಕರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.* ಈ ಕಾರ್ಯ ಕ್ರಮದಲ್ಲಿ ಲಕ್ಷಕ್ಕೂ ಅಧಿಕ ಜನರು ಸೇರಿದ್ದರು.