* ದೇಶದಲ್ಲಿ ಹಾವು ಕಡಿತ ಪ್ರಕರಣ (Snake bite) ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು (The Ministry of Health and Family Welfare) ಹಾವು ಕಡಿತವನ್ನು ಕಾಯಿಲೆ ಎಂದು ಘೋಷಣೆ ಮಾಡಿದೆ.* ಹಾವು ಕಡಿತದಿಂದ ಪ್ರತಿವರ್ಷ ದೇಶದಲ್ಲಿ 50000 ಕ್ಕೂ ಹೆಚ್ಚು ಜನರು ಬಲಿಯಾಗುತ್ತಿದ್ದು, ಇದನ್ನು ತಡೆಯಲು ಕೇಂದ್ರ ಸರ್ಕಾರ ಈ ಮಹತ್ವದ ಘೋಷಣೆ ಮಾಡಿದೆ.* 2030ರ ವೇಳೆಗೆ ಭಾರತದಲ್ಲಿ ಹಾವು ಕಡಿತದ ತಡೆಗಟ್ಟುವಿಕೆ ಮತ್ತು ಸೂಕ್ತ ಔಷಧ ಲಭ್ಯವಾಗುವಂತೆ ಮಾಡಲು ಕೇಂದ್ರ ಸರ್ಕಾರ ರಾಷ್ಟ್ರೀಯ ಕ್ರಿಯಾ ಯೋಜನೆಯನ್ನು(NAPSE) ಪ್ರಾರಂಭಿಸಿದೆ.* ಈಗಾಗಲೇ ಹಲವಾರು ರಾಜ್ಯಗಳು ಹಾವು ಕಡಿತವನ್ನು ಕಾಯಲೆ ಎಂದು ಘೋಷಿಸಿವೆ. ಇದುವರೆಗೂ ಇಂಥ ಘೋಷಣೆ ಮಾಡದ ರಾಜ್ಯಗಳಿಗೆ ಇಂಥ ಘೋಷಣೆ ಮಾಡುವಂತೆ ಸರ್ಕಾರ ತಿಳಿಸಿದೆ.* ಕರ್ನಾಟಕ ದೇಶದಲ್ಲಿಯೇ ಮೊದಲ ಬಾರಿಗೆ ಹಾವು ಕಡಿತವನ್ನು ಕಾಯಿಲೆ ಎಂದು ಘೋಷಿಸಿತ್ತು. ಇತ್ತೀಚೆಗೆ ತಮಿಳುನಾಡು ಸರ್ಕಾರ ಕೂಡ ಇದನ್ನು ಕಾಯಿಲೆ ಎಂದು ಘೋಷಿಸಿದೆ.* ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು(MoHFW) ಭಾರತದಲ್ಲಿ ಹಾವು ಕಡಿತದ ಪ್ರಕರಣಗಳು ಮತ್ತು ಸಾವುಗಳನ್ನು "ಅಧಿಕೃತ ರೋಗ" ಎಂದು ಘೋಷಿಸಿದ್ದು, ಎಲ್ಲಾ ಶಂಕಿತ, ಸಂಭವನೀಯ ಹಾವು ಕಡಿತದ ಪಕರಣಗಳನ್ನು ವರದಿ ಮಾಡುವುದನ್ನು ಕಡ್ಡಾಯಗೊಳಿಸಿದೆ.* "ಹಾವು ಕಡಿತವು ಸಾರ್ವಜನಿಕ ಆರೋಗ್ಯದ ಕಾಳಜಿಯ ವಿಷಯವಾಗಿದೆ ಮತ್ತು ಕೆಲವು ಸಂದರ್ಭಗಳಲ್ಲಿ ಅವು ಮರಣ, ಅನಾರೋಗ್ಯ ಮತ್ತು ಅಂಗವೈಕಲ್ಯವನ್ನು ಉಂಟುಮಾಡುತ್ತವೆ. ರೈತರು, ಬುಡಕಟ್ಟು ಜನಸಂಖ್ಯೆ ಇತ್ಯಾದಿಗಳು ಹೆಚ್ಚಿನ ಅಪಾಯದಲ್ಲಿವೆ" ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಪುಣ್ಯ ಸಲಿಲ ಶ್ರೀವಾಸ್ತವ ಅವರು ತಿಳಿಸಿದ್ದಾರೆ.