* ಇತ್ತೀಚೆಗಿರುವ ದಿನಗಳಲ್ಲಿ ಹೃದಯಾಘಾತದಿಂದ ಯುವಕರು ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಹಾಸನ ಜಿಲ್ಲೆಯಲ್ಲೇ ಕಳೆದ 39 ದಿನಗಳಲ್ಲಿ 18 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.* ಹೃದಯ ತಜ್ಞರೂ ಆಗಿರುವ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು ಹೃದಯಾಘಾತಗಳ ನಿಯಂತ್ರಣಕ್ಕಾಗಿ ‘ಸ್ಟೆಮಿ ಯೋಜನೆ’ನ್ನು ರಾಜ್ಯದ ಎಲ್ಲ ಕಡೆ ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದಾರೆ.* ಅವರು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಹಾಗೂ ರಾಜ್ಯ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.* ಹಾಸನ ಜಿಲ್ಲೆಯ ಬೇಲೂರು, ಸಕಲೇಶಪುರ, ಆಲೂರು, ಅರಕಲಗೂಡು ಹಾಗೂ ಚನ್ನರಾಯಪಟ್ಟಣದ ತಾಲೂಕು ಆಸ್ಪತ್ರೆಗಳಲ್ಲಿ ಸ್ಟೆಮಿ ಯೋಜನೆ ಜಾರಿಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅನಿಲ್ ಕುಮಾರ್ ಮನವಿ ಮಾಡಿದ್ದಾರೆ. ಜಯದೇವ ಆಸ್ಪತ್ರೆಯ ಸಹಕಾರದಿಂದ ತುರ್ತು ಚಿಕಿತ್ಸೆ ನೀಡುವ ಉದ್ದೇಶವಿದೆ.* ಸ್ಟೆಮಿ (STEMI) ಯೋಜನೆಯು ಹೃದಯಾಘಾತದಿಂದ ಸಾವಿನ ಪ್ರಮಾಣ ಕಡಿಮೆ ಮಾಡುವುದು ಎಂಬ ಉದ್ದೇಶ ಹೊಂದಿದೆ. ಇದು "ಹಬ್ ಅಂಡ್ ಸ್ಪೋಕ್" ಮಾದರಿಯಲ್ಲಿ ಜಾರಿಗೆ ಇರುತ್ತದೆ.* ತುರ್ತು ಎದೆನೋವಿನ ಪ್ರಕರಣಗಳಲ್ಲಿ ಇಸಿಜಿ ವರದಿ ತಕ್ಷಣ ಜಯದೇವ ಹೃದ್ರೋಗ ಸಂಸ್ಥೆಗೆ ಕಳಿಸಲಾಗುತ್ತದೆ. ನುರಿತ ವೈದ್ಯರಿಂದ ಮಾರ್ಗದರ್ಶನ ಪಡೆದ ನಂತರ ತುರ್ತು ಚಿಕಿತ್ಸೆ ಅಥವಾ ಹೆಚ್ಚಿನ ಚಿಕಿತ್ಸೆಗೆ ರೋಗಿಯನ್ನು ಸ್ಥಳಾಂತರಿಸಲಾಗುತ್ತದೆ.