* ಹಿರಿಯ ಐಎಎಸ್ ಅಧಿಕಾರಿ ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿ ಗೋವಿಂದ ಮೋಹನ್ ಅವರನ್ನು ಕೇಂದ್ರ ಸರ್ಕಾರವು ಮುಂದಿನ ಗೃಹ ಕಾರ್ಯದರ್ಶಿಯನ್ನಾಗಿ ಆಗಸ್ಟ್ 14ರಂದು ನೇಮಕ ಮಾಡಿದೆ. ಅಜಯ್ ಕುಮಾರ್ ಭಲ್ಲಾ ಅವರು ಆಗಸ್ಟ್ 22ರಂದು ನಿವೃತ್ತಿ ಹೊಂದಿದ ನಂತರ ಮೋಹನ್ ಅವರು ಈ ಸ್ಥಾನಕ್ಕೆ ಬರಲಿದ್ದಾರೆ.* ಸಿಕ್ಕಿಂ ಕೇಡರ್‌ನ 1989-ಬ್ಯಾಚ್‌ನ ಭಾರತೀಯ ಆಡಳಿತ ಸೇವೆಯ ಅಧಿಕಾರಿಯನ್ನು ಗೃಹ ವ್ಯವಹಾರಗಳ ಸಚಿವಾಲಯದಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿ ನೇಮಿಸಲಾಗಿದೆ. 1984ರ ಬ್ಯಾಚ್‌ನ ಐಎಎಸ್ ಅಧಿಕಾರಿ ಅಜಯ್ ಕುಮಾರ್ ಭಲ್ಲಾ ಅವರ ಅಧಿಕಾರಾವಧಿಯು ಆಗಸ್ಟ್ 22 ರಂದು ಪೂರ್ಣಗೊಂಡ ನಂತರ ಅವರು ಗೃಹ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ* ಜಾರಿ ನಿರ್ದೇಶನಾಲಯದ (ಇ.ಡಿ) ಹಂಗಾಮಿ ಮುಖ್ಯಸ್ಥ ರಾಹುಲ್ ನವೀನ್ ಅವರನ್ನು ಇ.ಡೀಯ ಪೂರ್ಣಾವಧಿ ನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.* ಎನ್‌ಎಸ್‌ಜಿ ಮಹಾನಿರ್ದೇಶಕ ನಳಿನ್ ಪ್ರಭಾತ್ ಅವರ ಅಧಿಕಾರ ಅವಧಿಯನ್ನು ಮೊಟಕುಗೊಳಿಸಲಾಗಿದೆ. ಅವರ ಕೇಡರ್ ಬದಲಾಯಿಸಲಾಗಿದೆ. ಅವರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮಹತ್ವದ ಹೊಣೆ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.