* ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ ಸೆಪ್ಟೆಂಬರ್ 06 ರಂದು (ಶುಕ್ರವಾರ) ನಡೆಯಲಿದ್ದು, ನಟಿ ಹಾಗೂ ವಿಧಾನಪರಿಷತ್‌ ಸದಸ್ಯೆ ಉಮಾಶ್ರೀ ಸೇರಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಗುವುದು.* 'ರಂಗಭೂಮಿ, ಕಲೆ, ಸಮಾಜ ಸೇವೆಯನ್ನು ಪರಿಗಣಿಸಿ ಉಮಾಶ್ರೀ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗುತ್ತಿದೆ' ಎಂದು ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ತಿಳಿಸಿದೆ.* ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ನಿರಂತರ ಸೇವೆಗಾಗಿ‌ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಚಂದ್ರಮೌಳೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಹಾಗೂ ಕೈಗಾರಿಕೆ ಮತ್ತು ಸಮಾಜ ಸೇವೆ ವಿಭಾಗದಲ್ಲಿ ಕೈ ಜೋಡಿಸಿದ ಎಸ್.ಕೆ.ಮೋದಿ ಅವರಿಗೆ  ಶ್ರೀಕೃಷ್ಣ ದೇವರಾಯ ವಿವಿ ಗೌರವ ಡಾಕ್ಟರೇಟ್ ಘೋಷಿಸಿದೆ.