* ವಿಶ್ವವಿಖ್ಯಾತ ಈ ಬಾರಿಯ ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಶುರುವಾಗಿದ್ದು, ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಹಿರಿಯ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ ಅವರು 2024ರ ದಸರಾ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. * ಈ ಬಾರಿಯ ದಸರಾ ಮಹೋತ್ಸವವು ಅಕ್ಟೋಬರ್.3ರಿಂದ ನಡೆಯಲಿದೆ. 3ರಂದು ಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ದೊರೆಯಲಿದೆ.* 2023ರ ಮೈಸೂರು ದಸರಾವನ್ನು ಹಂಸಲೇಖ ಅವರು ಉದ್ಘಾಟಿಸಿದರು. ಅಕ್ಟೋಬರ್ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ.* ಕನ್ನಡ ಸಾರಸ್ವತ ಲೋಕದಲ್ಲಿ ಹಂಪನಾ ಎಂದೆ ಚಿರ ಪರಿಚಿತರಾಗಿರುವ ಹಂ.ಪ. ನಾಗರಾಜಯ್ಯನವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿಎ ಆನರ್ಸ್ ಪದವಿ, ಮೈಸೂರು ವಿವಿಯಲ್ಲಿ ಎಂಎ ಪದವಿ ಪಡೆದಿರುವ ಇವರು, ವಡ್ಡಾರಾಧನೆ ಸಮಗ್ರ ಅಧ್ಯಯನಕ್ಕಾಗಿ ಬೆಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. * 1959ರಿಂದ ಅಧ್ಯಾಪಕ ವೃತ್ತಿ ಜೀವನ ಆರಂಭಿಸಿದ ಹಂಪನಾ ಅವರು ಮೈಸೂರಿನ ಮಹಾರಾಣಿ ಕಾಲೇಜು, ಶಿವಮೊಗ್ಗದ ಸಹ್ಯಾದ್ರಿ ಕಾಲೇಜು, ಮಂಡ್ಯ, ದಾವಣಗೆರೆ, ಬೆಂಗಳೂರಿನ ಸರ್ಕಾರಿ ಕಾಲೇಜು, ಬೆಂಗಳೂರು ವಿವಿಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.2018 - ಸುಧಾ ಮೂರ್ತಿ 2019 :- ಎಸ್ ಎಲ್ ಭೈರಪ್ಪ 2020 :- ಡಾ ಸಿ ಎನ್ ಮಂಜುನಾಥ್ 2021 :- ಎಸ್ ಎಂ ಕೃಷ್ಣ 2022 :- ರಾಷ್ಟ್ರಪತಿ ದ್ರೌಪದಿ ಮುರ್ಮ 2023 :- ಹಂಸಲೇಖ 2024 :- ಹಂಪಾ ನಾಗರಾಜಯ್ಯ