* ಬೆಂಗಳೂರಿನಲ್ಲಿ ಚೀನಾ ವೈರಸ್ ಪತ್ತೆಯಾಗಿರುವುದು ದೃಢಪಟ್ಟಿದೆ. HMPV(ಹ್ಯೂಮನ್ ಮೆಟಾನ್ಯೂಮೊವೈರಸ್) ವೈರಸ್ ಪತ್ತೆಯಾಗಿರುವುದರಿಂದ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.* ಚೀನಾದಲ್ಲಿ ಉಲ್ಬಣಿಸಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಸೋಂಕು ಭಾರತದಲ್ಲೂ ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಬೆಂಗಳೂರಿನಲ್ಲಿ 2, ಗುಜರಾತ್ ನಲ್ಲಿ 1 ಪ್ರಕರಣ ವರದಿಯಾಗಿದೆ.* ಕರ್ನಾಟಕದ ಸೋಂಕಿತ ಮಕ್ಕಳ ಪೈಕಿ 3 ತಿಂಗಳ ಹೆಣ್ಣುಮಗುವೊಂದನ್ನು ಡಿಸ್ಚಾರ್ಜ್ ಮಾಡಲಾಗಿದೆ, ಎರಡನೇ ಪ್ರಕರಣದಲ್ಲಿ 8 ತಿಂಗಳ ಗಂಡು ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. * ಹೆಚ್ಎಂಪಿವಿ ವೈರಾಣು ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. HMPV ಸೋಂಕಿನ ಬಗ್ಗೆ ಹೆಚ್ಚಿನ ಆತಂಕ ಪಡಬೇಕಿಲ್ಲ. ಮಾಸ್ಕ್ ಕಡ್ಡಾಯವಲ್ಲ. ಸಹಜ ಮುಂಜಾಗ್ರತೆ ವಹಿಸಿದರೆ ಸಾಕು. ಬೆಂಗಳೂರಿನಲ್ಲಿ ಸೋಂಕು ತಗುಲಿದ್ದ ಮಕ್ಕಳ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. * ಮುಖ್ಯ ಮುಂಜಾಗ್ರತಾ ಕ್ರಮಗಳು:- ಸೋಂಕಿತ ಪ್ರದೇಶಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ.- ಸಾರ್ವಜನಿಕ ಸ್ಥಳಗಳಲ್ಲಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ಬಳಕೆ ಕಡ್ಡಾಯ.- ಯಾವುದೇ ಆರೋಗ್ಯ ಸಮಸ್ಯೆ ಕಾಣಿಸಿದರೂ ತಕ್ಷಣ ಸಮೀಪದ ಆಸ್ಪತ್ರೆ ಸಂಪರ್ಕಿಸುವಂತೆ ಸೂಚನೆ.