* ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಪ್ರಯುಕ್ತ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ ನವದೆಹಲಿಯ ಭಾರತ ಮಂಟಪದಲ್ಲಿ ಸೆಪ್ಟೆಂಬರ್ 27 ರಂದು ಕಾರ್ಯಕ್ರಮದಲ್ಲಿ ಕರ್ನಾಟಕದ ಹಂಪಿ ಗ್ರಾಮ ಪಂಚಾಯಿತಿಗೆ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತ್ತು. * ಈ ಪ್ರಶಸ್ತಿಯನ್ನು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವರಾದ ಅಜಯ್ ಭಟ್ ಮತ್ತು ಕಾರ್ಯದರ್ಶಿ ವಿದ್ಯಾವತಿ ಅವರಿಂದ ಹಂಪಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಜನಿ ಷಣ್ಮುಖಗೌಡ ಅವರು ಸ್ವೀಕರಿಸಿದರು.* 'ಹಂಪಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯುನೆಸ್ಕೋ ವಿಶ್ವ ಪಾರಂಪರಿಕ ತಾಣವೂ ಸೇರಿದೆ. * ಈ 'ಪ್ರಶಸ್ತಿಗೆ ರಾಜ್ಯದ 15 ಗ್ರಾಮ ಪಂಚಾಯಿತಿಗಳು ಸೇರಿ ಒಟ್ಟು 729 ಅರ್ಜಿ ಸಲ್ಲಿಕೆಯಾಗಿದ್ದು, ರಾಜ್ಯದಿಂದ ಹಂಪಿ ಗ್ರಾಮ ಪಂಚಾಯಿತಿ ಮಾತ್ರ ಆಯ್ಕೆಯಾಗಿದೆ' ಎಂದು ರಾಜ್ಯದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಅನಿತಾ ಭಾಸ್ಕರ್ ಅವರು ತಿಳಿಸಿದರು.* ಹಂಪಿಯಲ್ಲಿ ಬಾಳೆ ನಾರಿನಿಂದ ಮಾಡುವ ಚೀಲ, ಸ್ಥಳೀಯ ಸಂಸ್ಕೃತಿ ಬಿಂಬಿಸುವ ಕರಕುಶಲ ಮಳಿಗೆ, ಹೋಂ ಸ್ಟೇಗಳಲ್ಲಿನ ಪ್ರವಾಸಿ ಸೌಲಭ್ಯ ಸೇರಿ ಪ್ರವಾಸೋದ್ಯಮಕ್ಕೆ ಪೂರಕವಾಗಿ ಸ್ಥಳೀಯ ಜನರನ್ನು ತೊಡಗಿಸಿಕೊಂಡಿದ್ದನು ಗಮನಿಸಿ ಈ ಪ್ರಶಸ್ತಿಯು ಲಭಿಸಿದೆ.