* ಮನೋಹರ್ ಲಾಲ್ ಅವರ ಆಪ್ತ ನಯಾಬ್ ಸೈನಿ (Nayab Singh Saini) ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ. ಮಂಗಳವಾರ (ಮಾರ್ಚ್ 12) ಸಂಜೆ 5 ಗಂಟೆಗೆ ನಯಾಬ್ ಸಿಂಗ್ ಸೈನಿ ಅವರು ಹರಿಯಾಣದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. * ಹರಿಯಾಣದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ನೂತನ ಸಿಎಂ ನಯಾಬ್ ಸೈನಿ ಅವರಿಗೆ ಪ್ರತಿಜ್ಞಾವಿಧಿಯನ್ನು ಭೋದಿಸಿದರು.* ಒಬಿಸಿ ಸಮುದಾಯದಿಂದ ಬಂದಿರುವ ಕುರುಕ್ಷೇತ್ರ ಸಂಸದ ನಯಾಬ್ ಸಿಂಗ್ ಸೈನಿ ಅವರನ್ನು ಕಳೆದ ವರ್ಷ(2023) ಅಕ್ಟೋಬರ್‌ನಲ್ಲಿ ಬಿಜೆಪಿ ಹರಿಯಾಣದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. 1996 ರಲ್ಲಿ ಬಿಜೆಪಿಯೊಂದಿಗೆ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದ ನಯಾಬ್ ಹರಿಯಾಣ ಬಿಜೆಪಿಯ ಸಾಂಸ್ಥಿಕ ರಚನೆಯಲ್ಲಿ ಪ್ರಾರಂಭಿಸಿ ಕ್ರಮೇಣ ಮೇಲೇರಿದವರು.* ಸೈನಿ ಅವರು 2002 ರಲ್ಲಿ ಅಂಬಾಲಾದಲ್ಲಿ ಬಿಜೆಪಿ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ನಂತರ 2005 ರಲ್ಲಿ ಅಂಬಾಲಾದಲ್ಲಿ ಜಿಲ್ಲಾ ಅಧ್ಯಕ್ಷರಾಗಿದ್ದರು. 2014 ರಲ್ಲಿ ನಾರಾಯಣಗಢ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು ಮತ್ತು ನಂತರ 2016 ರಲ್ಲಿ ಹರಿಯಾಣ ಸರ್ಕಾರದಲ್ಲಿ ಸಚಿವರಾಗಿ ನೇಮಕಗೊಂಡರು. 2019 ರ ಲೋಕಸಭಾ ಚುನಾವಣೆಯಲ್ಲಿ, ಸೈನಿ ಕುರುಕ್ಷೇತ್ರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.