Job Description: * ನವದೆಹಲಿಯಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ಮೊದಲ ದಿನದಂದು ಪರಿಸರ ಮತ್ತು ಹವಾಮಾನ ವೀಕ್ಷಣೆಗಾಗಿ ಜಿ-20 ಉಪಗ್ರಹ ಮಿಷನ್ ಅನ್ನು ಪ್ರಾರಂಭಿಸಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 09 ರಂದು ತಿಳಿಸಿದ್ದಾರೆ.* ಅಮೆರಿಕ ಅಧ್ಯಕ್ಷ ಜೋ ಬೈಡನ್, ಯುಕೆ ಪ್ರಧಾನಿ ರಿಷಿ ಸುನಕ್ ಮತ್ತು ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರು ಸೇರಿದಂತೆ ವಿಶ್ವದ ನಾಯಕರ ಸಮ್ಮುಖದಲ್ಲಿ ಭಾರತ್ ಮಂಟಪಂ ಅಂತರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಜಿ20 ನಾಯಕರ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಅವರು ಜಿ-20 ಉಪಗ್ರಹ ಮಿಷನ್ ಸಲಹೆ ನೀಡಿದರು. * ನವದೆಹಲಿಯಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯ, ದಕ್ಷಿಣ ಏಷ್ಯಾ ಮತ್ತು ಯುರೋಪ್‌ನಾದ್ಯಂತ ದೇಶಗಳನ್ನು ಸಂಪರ್ಕಿಸುವ ಹಡಗು ಮತ್ತು ರೈಲು ಸಾರಿಗೆ ಕಾರಿಡಾರ್ ಅನ್ನು ಪ್ರಧಾನಿ ಮೋದಿ ಸೆಪ್ಟೆಂಬರ್ 09 ರಂದು ಘೋಷಿಸಿದರು.* ಜಿ 20 ಶೃಂಗಸಭೆಯ ಹಿನ್ನೆಲೆಯಲ್ಲಿ ಸ್ಯಾಟ ಲೈಟ್ ಮಿಷನ್ ಫಾರ್ ಎನ್ವಿರಾನ್ಮೆಂಟ್ ಅಂಡ್ ಕ್ಲೈಮೇಟ್ ಅಬ್ಜರ್ವೇಶನ್ ಪ್ರಾರಂಭಿಸಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.