*  ಐಸಿಐಸಿಐ ಬ್ಯಾಂಕ್ ನಿರ್ಮಾತೃ ನಾರಾಯಣನ್ ವಘುಲ್ ತಮ್ಮ 88 ನೇ ವಯಸ್ಸಿನಲ್ಲಿ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಿಂದ ವೆಂಟಿಲೇಟರ್‌ನಲ್ಲಿದ್ದ ಅವರ ಸ್ಥಿತಿ ಗಂಭೀರವಾಗಿತ್ತು. * ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ವಘುಲ್ 44ನೇ ವಯಸ್ಸಿನಲ್ಲಿ ಸರ್ಕಾರಿ ಚಾಲಿತ ಬ್ಯಾಂಕ್ ಆಫ್ ಇಂಡಿಯಾದ ಕಿರಿಯ ಅಧ್ಯಕ್ಷರಾದರು. ರಾಜೀವ್ ಗಾಂಧಿ ಆಡಳಿತದ ಅವಧಿಯಲ್ಲಿ ಐಸಿಐಸಿಐ ಬ್ಯಾಂಕ್‌ನ ಮುಖ್ಯಸ್ಥರಾಗುವಂತೆ ಕೋರಲಾಯಿತು. * ವಘುಲ್ 80 ರ ದಶಕದ ಮಧ್ಯಭಾಗದಲ್ಲಿ ಆಗಿನ ಇಂಡಸ್ಟ್ರಿಯಲ್ ಕ್ರೆಡಿಟ್ ಮತ್ತು ಇನ್ವೆಸ್ಟ್‌ಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ (ಈಗಿನ ಐಸಿಐಸಿಐ ಬ್ಯಾಂಕ್) ಎಂಡಿ ಮತ್ತು ಸಿಒಒ ಆಗಿ ಅಧಿಕಾರ ವಹಿಸಿಕೊಂಡು, ಈ ಇಂಡಸ್ಟ್ರಿಯಲ್ ಕ್ರೆಡಿಟ್ ಮತ್ತು ಇನ್ವೆಸ್ಟ್‌ಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಹಣಕಾಸು ಸಂಸ್ಥೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ನಂತರ ನಾರಾಯಣ ಅವರ ಉಸ್ತುವಾರಿಯಲ್ಲಿಯೇ ಇಂಡಸ್ಟ್ರಿಯಲ್ ಕ್ರೆಡಿಟ್ ಮತ್ತು ಇನ್ವೆಸ್ಟ್‌ಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಬ್ಯಾಂಕನ್ನು * ಐಸಿಐಸಿಐ ಬ್ಯಾಂಕ್ ಆಗಿ ಪರಿವರ್ತಿಸಲಾಯಿತು. ವಘುಲ್ 2010ರಲ್ಲಿ ವ್ಯಾಪಾರ ಮತ್ತು ಕೈಗಾರಿಕೆ ವಿಭಾಗದಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದರು.