* ದಸರಾ ಆರಂಭವಾಗುವ ಸೆಪ್ಟೆಂಬರ್ ತಿಂಗಳ ಶುಕ್ಲ ಪಕ್ಷದಲ್ಲಿ 2 ಬಾರಿ ಪಂಚಮಿ ಬಂದಿದ್ದು, ಈ ಬಾರಿ 11ನೇ ದಿನಕ್ಕೆ ವಿಜಯದಶಮಿ ಬರಲಿದೆ. ಹಾಗಾಗಿ ಈ ಬಾರಿ ವಿಶೇಷವಾಗಿ 11 ದಿನಗಳ ದಸರಾ ಆಚರಣೆ ನಡೆಯಲಿದೆ. * ಆದರೆ ಜಂಬೂಸವಾರಿ ಮೆರವಣಿಗೆಯ ಅಂತಿಮ ದಿನಾಂಕವನ್ನು ರಾಜ್ಯ ಸರ್ಕಾರ ತೀರ್ಮಾನಿಸಲಿದೆ. ಮಹಾಲಯ ಅಮಾವಾಸ್ಯೆಯ ಬಳಿಕ ಆರಂಭವಾಗುವ ನವರಾತ್ರಿಯು ಈ ಬಾರಿ ದಶರಾತ್ರಿಯಾಗಲಿದೆ. ಇದು ದಸರಾ ಮಹೋತ್ಸವ ಇತಿಹಾಸದಲ್ಲಿಯೇ ಅಪರೂಪದ ಪ್ರಸಂಗವಾಗಿದೆ. * ದಸರಾ ಪರಂಪರೆ ಶುರುವಾಗಿ 410 ವರ್ಷ ಕಳೆದಿದೆ. 410 ವರ್ಷಗಳಿಂದಲೂ 10 ದಿನ ದಸರಾ ನಡೆದಿದೆ. ಆದರೆ ಈ ಬಾರಿ 11 ದಿನ ದಸರಾ ನಡೆಯುವ ಮೂಲಕ ಹೊಸ ದಾಖಲೆ ಸೃಷ್ಟಿ ಆಗಲಿದೆ.