* ವಿಶ್ವಕಪ್‌ (World Cup 2023) ಮಹಾಸಮರಕ್ಕೆ ಇಂದಿನಿಂದ ಅಂದರೆ ಅಕ್ಟೋಬರ್ 5 ರಿಂದ  (ಗುರುವಾರ) ಅಧಿಕೃತ ಚಾಲನೆ ಸಿಗಲಿದ್ದು, ಪ್ರಶಸ್ತಿಗಾಗಿ 10 ತಂಡಗಳು ಪೈಪೋಟಿ ನಡೆಸಲಿವೆ. ಇಂದಿನಿಂದ ಅಕ್ಟೋಬರ್ 5 ರಿಂದ ನವೆಂಬರ್ 19 ರ ವರೆಗೆ ವಿಶ್ವಕಪ್ ಕದನ ನಡೆಯಲಿದೆ.* 6 ಬಾರಿ ವಿಶ್ವಕಪ್ ಪ್ರತಿನಿಧಿಸಿರುವ ಭಾರತದ ಮಾಜಿ ಕ್ರಿಕೆಟರ್, ಕ್ರಿಕೆಟ್‌ನ ಆರಾಧ್ಯ ದೈವ ಸಚಿನ್ ತೆಂಡೂಲ್ಕರ್ 2023ರ ವಿಶ್ವಕಪ್ ಟ್ರೋಫಿಯೊಂದಿಗೆ ಕ್ರೀಡಾಂಗಣಕ್ಕೆ ಎಂಟ್ರಿ ಕೊಡಲಿದ್ದಾರೆ. ಈ ವೇಳೆ ಎಲ್ಲಾ 10 ತಂಡದ ನಾಯಕರು ಉಪಸ್ಥಿತರಿಲಿದ್ದಾರೆ. ಈ ಮೂಲಕ ವಿಶ್ವಕಪ್ ಸಮರಕ್ಕೆ ಅಧಿಕೃತ ಚಾಲನೆ ಸಿಗಲಿದೆ. * ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ಟೀಂ ನ್ಯೂಜಿಲೆಂಡ್ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.* ಸಾಕಷ್ಟು ನಿರೀಕ್ಷೆಗಳು, ಟೀಂ ಇಂಡಿಯಾ, ಅಕ್ಟೋಬರ್ 8 ರಂದು ವಿಶ್ವಕಪ್‌ನ ಮೊದಲ ಪಂದ್ಯವನ್ನ ಆಸೀಸ್ ವಿರುದ್ಧ ಆಡಲಿದೆ. ಯುವ ಹಾಗೂ ಅನುಭವಿ ಆಟಗಾರರನ್ನೇ ಹೊಂದಿರುವ ಭಾರತ, ಎಲ್ಲಾ ವಿಭಾಗಗಳಲ್ಲೂ ಸಮರ್ಥ ಆಟಗಾರರನ್ನ ಹೊಂದಿದೆ. * ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕನ್ನಡಿಗ ಕೆಎಲ್ ರಾಹುಲ್, ಶುಭಮನ್ ಗಿಲ್, ಪಾಂಡ್ಯ, ಜಡೇಜಾ, ಬೂಮ್ರಾ, ಸಿರಾಜ್, ಇಶಾನ್ ಕಿಶನ್, ಶಮಿ, ಅಶ್ವಿನ್, ಸೂರ್ಯಕುಮಾರ್ ಯಾದವ್ ಸೇರಿದಂತೆ 15 ಜನರ ತಂಡವನ್ನ ಅಳೆದುತೂಗಿ ಕಟ್ಟಲಾಗಿದ್ದು, ಗೆಲ್ಲುವ ನೆಚ್ಚಿನ ತಂಡವಾಗಿದೆ.