* ಭಾರತದ ಮಧ್ಯಪ್ರದೇಶದ ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ (IMC) ನಿಷೇಧಿತ ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಮರುಬಳಕೆ ಮಾಡಲು ವಿಸ್ತೃತ ಉತ್ಪಾದಕರ ಜವಾಬ್ದಾರಿ (EPR) ಕ್ರೆಡಿಟ್ ಪಡೆಯುವ ದೇಶದ ಮೊದಲ ನಗರ ಸಂಸ್ಥೆಯಾಗುವ ಮೂಲಕ ಇತಿಹಾಸ ನಿರ್ಮಿಸಿದೆ. * ಇಂದೋರ್ ನಗರದಲ್ಲಿ ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಸಂಪೂರ್ಣ ನಿಷೇಧವನ್ನು ಜಾರಿಗೆ ಬಂದಿದ್ದು, ಇತ್ತೀಚಿನ ದಿನಗಳಲ್ಲಿ IMC ಸುಮಾರು ಎಂಟು ಟನ್ ಗಳಷ್ಟು ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಂಡಿದೆ.* ಕೇಂದ್ರ ಸರ್ಕಾರದ ವಾರ್ಷಿಕ ಸ್ವಚ್ಛತಾ ಸಮೀಕ್ಷೆಯಲ್ಲಿ ಇಂದೋರ್ ಸತತ ಆರನೇ ವರ್ಷಕ್ಕೆ ಭಾರತದ ಸ್ವಚ್ಛ ನಗರ ಎಂದು ಗುರುತಿಸಲ್ಪಟ್ಟಿದೆ.