* ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲೂ ನಾಲ್ಕು ವಿಕೆಟ್ಗಳಿಂದ ಜಯಸಿರುವ ಟೀಮ್ ಇಂಡಿಯಾ, ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. * ಕಟಕ್ ನ ಬಾರಾಬತಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಶತಕ ಬಾರಿಸುವ ಮೂಲಕ ಮತ್ತೆ ಫಾರ್ಮ್ ಗೆ ಮರಕಳಿಸಿ ಭಾರತ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.* ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಇಂಗ್ಲೆಂಡ್ ತಂಡ 49.5 ಓವರ್ ಗಳಲ್ಲಿ 304 ರನ್ ಗಳಿಸುವ ಮೂಲಕ ಆಲೌಟ್ ಆಯಿತು. ಇಂಗ್ಲೆಂಡ್ ತಂಡದ ಪರ ಆರಂಭಿಕ ಆಟಗಾರ ಪಿಲ್ ಸಾಲ್ಟ್ 26 ರನ್ ಗಳಿಸಿದಾಗ ವರುಣ್ ಬೌಲಿಂಗ್ ನಲ್ಲಿ ಜಡೇಜಾಗೆ ಕ್ಯಾಚ್ ನೀಡಿ ಔಟಾದರು. * ಬೆನ್ ಡಕೆಟ್ 65, ಜೋ ರೂಟ್ 69 ರನ್ ಗಳಿಸಿದ ಕ್ರಮವಾಗಿ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ಹ್ಯಾರಿ ಬ್ರೂಕ್ 31, ನಾಯಕ ಜೊಸ್ ಬಟ್ಲರ್ 34, ಲಿಯಾಮ್ ಲಿವಿಂಗ್ ಸ್ಟೊನ್ 41 ರನ್ ಗಳಿಸದರು. ಇವರನ್ನು ಹೊರತುಪಡಿಸಿ ಉಳಿದ ಆಟಗಾರರು ಭಾರತ ಬೌಲಿಂಗ್ ಎದುರು ಹೆಚ್ಚಿನ ಪ್ರತಿರೋಧ ತೋರಲಿಲ್ಲ.* ಇಂಗ್ಲೆಂಡ್ ನೀಡಿದ 305 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಭಾರತದ ಪರ ರೋಹಿತ್ 90 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 12 ಬೌಂಡರಿಗಳೊಂದಿಗೆ 119 ರನ್ ಗಳಿಸಿದರು. ಅಲ್ಲದೇ ಏಕದಿನ ಪಂದ್ಯಗಳಲ್ಲಿ 32ನೇ ಶತಕ ಬಾರಿಸುವ ಮೂಲಕ ಅತಿ ಹೆಚ್ಚು ಶತಕ ಗಳಿಸಿದ ಭಾರತದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದರು.* ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಒಟ್ಟು 7 ಸಿಕ್ಸರ್ ಸಿಡಿಸಿದ್ದು, ಆ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ರೋಹಿತ್ ಕ್ರಿಸ್ ಗೇಲ್ ಅವರನ್ನೂ ಹಿಂದಿಕ್ಕಿದ್ದಾರೆ.* ಶುಭ್ಮನ್ ಗಿಲ್ 52 ಎಸೆತಗಳಲ್ಲಿ 60 ರನ್ ಗಳಿಸಿದರು. ಆದರೆ ವಿರಾಟ್ ಕೊಹ್ಲಿ 8 ಎಸೆತ ಎದುರಿಸಿದ ಕೊಹ್ಲಿ ಕೇವಲ 5 ರನ್ ಗಳಿಸಿ ಔಟ್ ಆದರು. ನಂತರ ಬಂದ ಶ್ರೇಯಸ್ ಅಯ್ಯರ್ 44, ಅಕ್ಸರ್ ಪಟೇಲ್ ಅಜೇಯ 41 ರನ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು.* ಕೆಎಲ್ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ಟಾಲಾ 10 ರನ್ ಗಳಿಸಿ ನಿರ್ಗಮಿಸಿದರು. ರವೀಂದ್ರ ಜಡೇಜ ಅಜೇಯ 11 ರನ್ ಗಳಿಸುವುದರೊಂದಿಗೆ ಭಾರತ ಇನ್ನೂ 33 ಎಸೆತ ಬಾಕಿ ಇರುವಾಗಲೇ 44.3 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 308 ರನ್ ಗಳಿಸುವ ಮೂಲಕ 2ನೇ ಏಕದಿನ ಪಂದ್ಯವನ್ನು ಗೆದ್ದುಕೊಂಡಿತು.* ಶತಕ ಗಳಿಸುವ ಮೂಲಕ ಪಂದ್ಯ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ ರೋಹಿತ್ ಶರ್ಮಾ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದರು.