* ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗಳನ್ನು ಬಲಪಡಿಸಲು 108 ಆ್ಯಂಬುಲೆನ್ಸ್ ಸೇವೆಯನ್ನು ಖಾಸಗಿ ನಿಯಂತ್ರಣದಿಂದ ಹೊರತಾಗಿ ಆರೋಗ್ಯ ಇಲಾಖೆಯ ನೇರ ನಿರ್ವಹಣೆಗೆ ತರುವ ಸರ್ಕಾರದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.* ಈ ಹೆಜ್ಜೆಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು ₹250 ಕೋಟಿ ಉಳಿತಾಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.* 715 ಆಂಬ್ಯುಲೆನ್ಸ್ಗಳ ನಿರ್ವಹಣೆಗೆ ರಾಜ್ಯ ಮಟ್ಟದಲ್ಲಿ ಕೇಂದ್ರೀಯ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಸ್ಥಾಪಿಸಲಾಗುವುದು. ಇದಕ್ಕಾಗಿ ‘112 NG-ERSS’ ಸಾಫ್ಟ್ವೇರ್ ಬಳಸಲಾಗುತ್ತದೆ.* ಎಲ್ಲಾ ಜಿಲ್ಲೆಗಳಲ್ಲಿ 108 ಕಂಟ್ರೋಲ್ ಸೆಂಟರ್ ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ.* ಚಾಲಕರು ಹಾಗೂ ನರ್ಸಿಂಗ್ ಸಿಬ್ಬಂದಿಯನ್ನು ಜಿಲ್ಲಾ ಮಟ್ಟದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನೇಮಿಸಲಾಗುತ್ತದೆ. ಪ್ರಾಥಮಿಕವಾಗಿ ಚಾಮರಾಜನಗರ ಜಿಲ್ಲೆಯಲ್ಲಿ ಈ ವ್ಯವಸ್ಥೆ ಆರಂಭವಾಗಿ, ಹಂತ ಹಂತವಾಗಿ ಇಡೀ ರಾಜ್ಯಕ್ಕೆ ವಿಸ್ತಾರಗೊಳ್ಳಲಿದೆ.* ರಾಜ್ಯದಲ್ಲಿರುವ 1000 ಕ್ಕೂ ಹೆಚ್ಚು ಸ್ಟೇಟ್ ಆಂಬ್ಯುಲೆನ್ಸ್ಗಳನ್ನು ಕೂಡಾ 108 ಕಮಾಂಡ್ ಸೆಂಟರ್ ಅಧೀನಕ್ಕೆ ತರಲು ಯೋಜನೆ ರೂಪಿಸಲಾಗಿದೆ.