* ಕೆಕೆಆರ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಈ ಬಾರಿ ಇಂಡಿಯನ್ಸ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.* 18ನೇ ಆವೃತ್ತಿಯ ಜನಪ್ರಿಯ ಹಿಂದಿ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಬಾಲಿವುಡ್ ಮೆಗಾ ಸ್ಟಾರ್ ಸಲ್ಮಾನ್ ಖಾನ್ ಪಂಜಾಬ್ ಕಿಂಗ್ಸ್ ತಂಡದ ಹೊಸ ನಾಯಕನ ಹೆಸರನ್ನು ಘೋಷಿಸಿದರು.* ಇತ್ತೀಚಿಗೆ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಪಂಜಾಬ್ ತಂಡವು 30 ವರ್ಷದ ಶ್ರೇಯಸ್ ಅಯ್ಯರ್ ಅವರನ್ನು ಖರೀದಿಸಿತ್ತು.* ಐಪಿಎಲ್ ಇತಿಹಾಸದಲ್ಲೇ ರಿಷಬ್ ಪಂತ್ ಬಳಿಕ ಎರಡನೇ ದುಬಾರಿ ಆಟಗಾರರಾದ ಶ್ರೇಯಸ್ ಅಯ್ಯರ್ ₹26.75 ಕೋಟಿಗೆ ಹರಾಜಾಗಿದ್ದು, ಪಂಜಾಬ್ ಕಿಂಗ್ಸ್ ನಾಯಕನ ಸ್ಥಾನಕ್ಕಾಗಿ ಇವರನ್ನು ಆಯ್ಕೆ ಮಾಡಲಾಗಿದೆ ಎಂಬ ನಿರೀಕ್ಷೆ ಮೂಡಿತ್ತು.* ನಾಯಕತ್ವ ವಹಿಸಿಕೊಳ್ಳುತ್ತಿರುವುದು ತುಂಬಾ ಸಂತಸ ತಂದಿದೆ. ತಂಡದ ಮ್ಯಾನೇಜ್ಮೆಂಟ್ ನನ್ನ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವಂತೆ ಆಡುತ್ತೇನೆ’ ಎಂದು ಶ್ರೇಯಸ್ ಹೇಳಿದ್ದಾರೆ. * "ಶ್ರೇಯಸ್ ಬುದ್ಧಿವಂತ ಆಟಗಾರ ಮತ್ತು ಪರಿಸ್ಥಿತಿಯನ್ನು ಚೆನ್ನಾಗಿ ಅರ್ಥಮಾಡಿಕೊಂಡು ಅದಕ್ಕೆ ತಕ್ಕಂತೆ ಸ್ಪಂದಿಸುತ್ತಾರೆ. ಅವರಿಗೆ ಉತ್ತಮ ಅನುಭವವಿದೆ ಮತ್ತು ಅವರು ಯಶಸ್ವಿ ನಾಯಕನೂ ಆಗಿದ್ದಾರೆ." ಎಂದು ಪಂಜಾಬ್ ತಂಡದ ಕೋಚ್ ರಿಕಿ ಪಾಂಟಿಂಗ್ ಹೇಳಿದ್ದಾರೆ.* ಪಂಜಾಬ್ ತಂಡವು ಇದುವರೆಗೆ ಒಂದು ಬಾರಿಯೂ ಚಾಂಪಿಯನ್ ಆಗಿಲ್ಲ. 2024ರ ಐಪಿಎಲ್ ಟೂರ್ನಿಯಲ್ಲಿ ಶ್ರೇಯಸ್ ನಾಯಕತ್ವದ ಕೋಲ್ಕತ್ತ ನೈಟ್ ರೈಡರ್ಸ್ ಚಾಂಪಿಯನ್ ಆಗಿತ್ತು.* ಮುಂಬೈ ತಂಡವು ರಣಜಿ ಟ್ರೋಫಿ ಮತ್ತು ಇರಾನಿ ಟ್ರೋಫಿ ಜಯಿಸಿತು. ಅವರ ನಾಯಕತ್ವದಲ್ಲಿ, ಮುಂಬೈ ತಂಡವು ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ಕೂಡ ಜಯಿಸಿತ್ತು.