* IREDA ಪೂರ್ಣ ಹೆಸರು ಇಂಡಿಯನ್ ರಿನ್ಯೂವಬಲ್ ಎನರ್ಜಿ ಡೆವಲಪ್‌ಮೆಂಟ್ ಏಜೆನ್ಸಿ ಲಿಮಿಟೆಡ್.* ಇತ್ತೀಚೆಗೆ ಈ ಸಂಸ್ಥೆಯು 2024ನೇ ವರ್ಷವನ್ನು 'ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಶಿಸ್ತು' ವರ್ಷವೆಂದು ಘೋಷಿಸಿದೆ.* ಹೊಸ ಕಾರ್ಯತಂತ್ರ ಮತ್ತು ಭೌಗೋಳಿಕ ಪ್ರದೇಶಗಳಲ್ಲಿ ಭವಿಷ್ಯದ ಮಾರ್ಗಸೂಚಿಯನ್ನು ರಚಿಸುವುದು ಈ ಸಂಸ್ಥೆಯ ಉದ್ದೇಶವಾಗಿದೆ.* ಇಂಡಿಯನ್ ರಿನ್ಯೂವಬಲ್ ಎನರ್ಜಿ ಡೆವಲಪ್‌ಮೆಂಟ್ ಏಜೆನ್ಸಿ ಲಿಮಿಟೆಡ್ ಅನ್ನು 1987 ರಲ್ಲಿ ಸ್ಥಾಪಿಸಲಾಯಿತು. ಪ್ರಸ್ತುತ ಅದರ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಕುಮಾರ್ ದಾಸ್.* IREDA ಭಾರತ ಸರ್ಕಾರದ 'ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ' ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು ಮಿನಿರತ್ನ ಕೆಟಗರಿ 1 ಕಂಪನಿಯಾಗಿದೆ.