Job Description: * ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮಹತ್ವಾಕಾಂಕ್ಷಿ ಯೋಜನೆಯಾದ ಗಗನಯಾನ ಯೋಜನೆಯ ಭಾಗದ ಬಹು ನಿರೀಕ್ಷಿತ ಪ್ಯಾರಾಚೂಟ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ.* ಗಗನಯಾನಿಗಳನ್ನು ಹೊತ್ತ ಕೋಶವನ್ನು (ಮಾಡ್ಯೂಲ್) ಇಳಿಸುವಲ್ಲಿ ಬಳಕೆಯಾಗುವ ಪ್ಯಾರಾಚೂಟ್‌ಗಳ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೊ) ತಿಳಿಸಿದೆ.* ಇಸ್ರೊ ಮಾನವಸಹಿತ ಗಗನಯಾನಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಈ ನಡುವೆ ಗಗನಯಾನಿಗಳನ್ನು ಹೊತ್ತ ಕೋಶವು ಭೂಮಿಗೆ ಇಳಿಯುವಾಗ ಒಟ್ಟು 10 ಪ್ಯಾರಾಚೂಟ್‌ಗಳು ಹಲವು ಹಂತಗಳಲ್ಲಿ ಕೆಲಸ ಮಾಡುತ್ತವೆ. ಮೊದಲ ಎರಡು ಹಂತದಲ್ಲಿ ಕೆಲಸ ಮಾಡುವ ಒಟ್ಟು ನಾಲ್ಕು ಪ್ಯಾರಾಚೂಟ್‌ಗಳ ವ್ಯವಸ್ಥೆಯನ್ನು ಮಾರ್ಚ್ 1 ಮತ್ತು ಮಾರ್ಚ್ 3ರಂದು ಪರೀಕ್ಷೆಗೆ ಒಳಪಡಿಸಲಾಗಿತ್ತು. * ಮತ್ತೊಂದು ಹಂತದ ಈ ಪ್ಯಾರಾಚೂಟ್ ತಂತ್ರಜ್ಞಾನವನ್ನು ಚಂಡೀಗಡದ ಟರ್ಮಿನಲ್ ಬ್ಯಾಲಿಸ್ಟಿಕ್ ರಿಸರ್ಚ್ ಲ್ಯಾಬೊರೇಟರಿಯಲ್ಲಿ (ಟಿಬಿಆರ್‌ಎಲ್) ಪರೀಕ್ಷಿಸಲಾಗಿದೆ. ಗಗನಯಾನಿಗಳನ್ನು ಹೊತ್ತ ಕೋಶವು ಬಾಹ್ಯಾಕಾಶದಿಂದ ಭೂಮಿಯ ವಾತಾವರಣವನ್ನು ಪ್ರವೇಶಿಸಿ, ನೆಲಕ್ಕೆ ಇಳಿಯುವಾಗ ಇರಬಹುದಾದ ಭೌತಿಕ ಸ್ಥಿತಿಯನ್ನು, ತೆರೆದ ಪ್ರಯೋಗಾಲಯದಲ್ಲಿ ನಿರ್ಮಿಸಿ ಈ ಪರೀಕ್ಷೆ ನಡೆಸಲಾಗಿದೆ ಎಂದು ಇಸ್ರೋ ತಿಳಿಸಿದೆ.