* ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಟ್ರಸ್ಟ್ ಕೊಡಮಾಡುವ 2022–23ನೇ ಸಾಲಿನ 'ಸಿದ್ಧಗಂಗಾ ಶ್ರೀ' ಪ್ರಶಸ್ತಿಗೆ ಇಸ್ರೊ ಮಾಜಿ ಅಧ್ಯಕ್ಷ ಎ. ಎಸ್. ಕಿರಣ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಕಾರ್ಯದರ್ಶಿ ಕೆ.ಎಚ್.ಶಿವರುದ್ರಯ್ಯ ಅವರು ತಿಳಿಸಿದ್ದಾರೆ. * ತುಮಕೂರು ಸಿದ್ದಗಂಗಾ ಮಠದಲ್ಲಿ ಡಿಸೆಂಬರ್ 17 ರಂದು ನಡೆಯುವ ಟ್ರಸ್ಟ್ ನ  67ನೇ ಸರ್ವಸದಸ್ಯರ ವಾರ್ಷಿಕ ಮಹಾಧಿವೇಶನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.* ಈ ಪ್ರಶಸ್ತಿಯು ₹1 ಲಕ್ಷ ನಗದು, ಅಭಿನಂದನಾ ಪತ್ರ, ಸ್ಮರಣಿಕೆ ಒಳಗೊಂಡಿದ್ದು, ಬಾಹ್ಯಾಕಾಶ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಎ.ಎಸ್.ಕಿರಣ್‌ಕುಮಾರ್ ಅವರ ಜೀವಮಾನ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ.