* ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವನ್ನು ನಿರ್ಣಾಯಕ ಗೆಲುವಿನತ್ತ ಮುನ್ನಡೆಸಿದ ಹೇಮಂತ್ ಸೊರೆನ್ ನವೆಂಬರ್ 28 ರಂದು 4ನೇ ಬಾರಿಗೆ ಜಾರ್ಖಂಡ್ನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು. * ರಾಂಚಿಯ ಮೊರ್ಹಬಾದಿ ಮೈದಾನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು 49 ವರ್ಷದ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆ ಎಂಎಂ) ನಾಯಕ ಹೇಮಂತ್ ಸೊರೆನ್ ಅವರಿಗೆ ಪ್ರತಿಜ್ಞಾವಿಧಿ ಬಿಡಿಸಿದ್ದರು.* ಹೇಮಂತ್ ಸೊರೆನ್ ನೇತೃತ್ವದ ಅವರ ಜೆಎಂಎಂ ಮತ್ತು ಕಾಂಗ್ರೆಸ್ ಮೈತ್ರಿಯು ಜಾರ್ಖಂಡ್ನಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿತು. 81 ಸದಸ್ಯ ಬಲದ ವಿಧಾನಸಭೆಯಲ್ಲಿ 56 ಸ್ಥಾನಗಳನ್ನು ಗೆದ್ದುಕೊಂಡಿತು. ಬಿಜೆಪಿ ನೇತೃತ್ವದ ಎನ್ಡಿಎ ಕೇವಲ 24 ಸೀಟು ಮಾತ್ರ ಗೆದ್ದಿದೆ. ಬಹುಮತಕ್ಕೆ ಬೇಕಾಗಿದ್ದ 41 ಸೀಟುಗಳು.