* ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರು ಜುಲೈ 4 ರಂದು ಜಾರ್ಖಂಡ್‌ನ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಚಂಪೈ ಸೊರೆನ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಒಂದು ದಿನದ ನಂತರ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. * ರಾಜಭವನದಲ್ಲಿ ಸೋರೆನ್ ಅವರು ರಾಜ್ಯಪಾಲರಿಂದ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.* ಅಕ್ರಮ ಹಣ ವ್ಯವಹಾರ ಪ್ರಕರಣ ಆರೋಪದಲ್ಲಿ ಇಡಿಯಿಂದ ಬಂಧನಕ್ಕೊಳಗಾಗುವ ಮುನ್ನ ಹೇಮಂತ್ ಸೊರೇನ್ ತಮ್ಮ ಸಿಎಂ ಸ್ಥಾನವನ್ನು ತೊರೆದಿದ್ದರು.* ರಾಜ್ಯಪಾಲರಿಗೆ ಚಂಪೈ ಸೊರೇನ್ ರಾಜೀನಾಮೆ ಪತ್ರ ನೀಡಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್ (Hemant Soren) ಇಲ್ಲಿ ಸರ್ಕಾರ ರಚಿಸಲಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸುವ ಮೊದಲು ಜನವರಿಯಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು.* ಸೋರೆನ್ ಅವರ ತಂದೆ ಮತ್ತು ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್, ಅವರ ತಾಯಿ ರೂಪಿ ಸೊರೆನ್, ಪತ್ನಿ ಕಲ್ಪನಾ ಸೊರೆನ್ ಮತ್ತು ಜೆಎಂಎಂ ನೇತೃತ್ವದ ಮೈತ್ರಿಕೂಟದ ಹಿರಿಯ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು.* "ಅತ್ಯುತ್ತಮ ರಾಜ್ಯಪಾಲರಿಗೆ ಧನ್ಯವಾದಗಳು. ಪ್ರತಿಸ್ಪರ್ಧಿಗಳು ರೂಪಿಸಿದ ಪ್ರಜಾಪ್ರಭುತ್ವ ವಿರೋಧಿ ಪಿತೂರಿಯ ಅಂತ್ಯವು ಪ್ರಾರಂಭವಾಗಿದೆ. ಸತ್ಯಮೇವ ಜಯತೆ" ಎಂದು ಸೋರೆನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.