* ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಮುಂಬರುವ ಸೆಂಬ್ಲಿ ಚುನಾವಣೆಗಳ ಜಾರ್ಖಂಡ್ ಚುನಾವಣೆಯ ಬ್ರಾಂಡ್ ಅಂಬಾಸಿಡರ್ ಆಗಿ ಚುನಾವಣಾ ಆಯೋಗ ನೇಮಿಸಿದೆ.* "ಮಹೇಂದ್ರ ಸಿಂಗ್ ಧೋನಿ ತಮ್ಮ ಫೋಟೋ ಬಳಸಲು ಚುನಾವಣಾ ಆಯೋಗಕ್ಕೆ ಒಪ್ಪಿಗೆ ನೀಡಿದ್ದಾರೆ. ಇತರ ವಿವರಗಳಿಗಾಗಿ ನಾವು ಅವರೊಂದಿಗೆ ಸಂಪರ್ಕದಲ್ಲಿದ್ದೇವೆ. ಮಹೇಂದ್ರ ಸಿಂಗ್ ಧೋನಿ ಮತದಾರರನ್ನು ಕ್ರೋಢೀಕರಿಸುವ ಕೆಲಸ ಮಾಡುತ್ತಾರೆ" ಎಂದು ಮುಖ್ಯ ಚುನಾವಣಾಧಿಕಾರಿ ಕೆ.ರವಿಕುಮಾರ್ ತಿಳಿಸಿದ್ದಾರೆ.*  ಧೋನಿ ಅವರು ಸ್ವೀಪ್ (ಸಿಸ್ಟಮ್ಯಾಟಿಕ್ ವೋಟರ್ಸ್ ಎಜುಕೇಶನ್ ಮತ್ತು ಎಲೆಕ್ಟೋರಲ್ ಪಾರ್ಟಿಸಿಪೇಷನ್) ಕಾರ್ಯಕ್ರಮದ ಅಡಿಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಕೆಲಸ ಮಾಡುತ್ತಾರೆ. * ನವೆಂಬರ್ 13 ರಂದು ಮೊದಲ ಹಂತದಲ್ಲಿ ಒಟ್ಟು ನಲವತ್ಮೂರು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.