* ಅಲಹಾಬಾದ್ ಹೈಕೋರ್ಟ್ನ ನ್ಯಾಯಾಧೀಶರ ವಿರುದ್ಧ ಹಲವು ಪಕ್ಷಗಳ ಸದಸ್ಯರು ಸಲ್ಲಿಸಿದ ವಜಾ ವಾಗ್ದಂಡನೆಯನ್ನು ಸ್ವೀಕರಿಸಿ, ತನಿಖೆಗೆ 3 ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.* ಈ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ನ್ಯಾ. ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನ್ಯಾ. ಎಂ.ಎಂ. ಶ್ರೀವಾಸ್ತವ ಮತ್ತು ಹಿರಿಯ ವಕೀಲ ಬಿ.ವಿ. ಆಚಾರ್ಯ ಇದ್ದಾರೆ.* ನ್ಯಾ. ಅರವಿಂದ್ ಕುಮಾರ್ ಮತ್ತು ಬಿ.ವಿ. ಆಚಾರ್ಯ ಇಬ್ಬರೂ ಕರ್ನಾಟಕದವರು. ಅರವಿಂದ್ ಕುಮಾರ್ 2009ರಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡು 2023ರಲ್ಲಿ ಸುಪ್ರೀಂ ಕೋರ್ಟ್ಗೆ ಬಂದರು. ಬಿ.ವಿ. ಆಚಾರ್ಯ 91 ವರ್ಷದ ಹಿರಿಯ ವಕೀಲರಾಗಿದ್ದು, ಐದು ಬಾರಿ ಕರ್ನಾಟಕದ ಅಡ್ವಕೇಟ್ ಜನರಲ್ ಆಗಿ ಸೇವೆಸಲ್ಲಿಸಿದ್ದಾರೆ.