* ಹರಿಯಾಣ ಮತ್ತು ಕೇಂದ್ರಾಡಳಿತ ಪ್ರದೇಶ ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಅಕ್ಟೋಬರ್ 8 ರಂದು ಪ್ರಕಟವಾಗಿದ್ದು, ಬಿಜೆಪಿ ಸತತ 3ನೇ ಬಾರಿಗೆ ಹರಿಯಾಣದಲ್ಲಿ ಅಧಿಕಾರಕ್ಕೇರಿದೆ. ಇತ್ತ ಕಣಿವೆ ನಾಡಿನಲ್ಲಿ ನ್ಯಾಷನಲ್ ಕಾನ್ಫ್ರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಗೆ ಸರಳ ಬಹುಮತ ದೊರೆತಿದೆ.* ಹರಿಯಾಣ ಸಿಎಂ ನೈಬ್ ಸಿಂಗ್ ಸೈನಿ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿ ಏಕಪಕ್ಷವಾಗಿ ಜಯ ಸಾಧಿಸಿದೆ.* 90 ಸದಸ್ಯ ಬಲದ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷ 48 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 37, ಐಎನ್ಎಲ್ಡಿ 2 ಸ್ವತಂತ್ರ ಮೂವರು ಅಭ್ಯರ್ಥಿಗಳು ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. * 370ನೇ ವಿಧಿ ರದ್ದಾಗಿ 10 ವರ್ಷದ ಬಳಿಕ ನಡೆದ ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫ್ರೆನ್ಸ್ ಸರಳ ಬಹುಮತದಿಂದ ಜಯಸಾದಿಸಿದೆ.* ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರ ಜೆಕೆಎನ್ಸಿ ಗೆ 4 ಸ್ಥಾನಗಳಷ್ಟು ಮಾತ್ರ ಹಿಂದಿದೆ. 42 ಸ್ಥಾನಗಳಲ್ಲಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಪಕ್ಷ ಗೆದ್ದಿದೆ. ಮಿತ್ರ ಪಕ್ಷ ಕಾಂಗ್ರೆಸ್ 32 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ ಕೇವಲ 6 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ.* ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ ಸರ್ಕಾರವಿದ್ದ ಹರಿಯಾಣದಲ್ಲಿ ಆಡಳಿತ ವಿರೋಧಿ ಅಲೆ ಉಂಟಾಗಿದ್ದು, ಈ ಬಾರಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿತ್ತು. ಆದರೆ ಮತದಾನೋತ್ತರ ಸಮೀಕ್ಷೆಗಳು ತಲೆಕೆಳಗಾಗಿವೆ.