* ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸದಸ್ಯರನ್ನಾಗಿ ನೇಮಿಸಲಾಗಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿ ಈ ಕುರಿತು ಅಧಿಕೃತವಾಗಿ ಪ್ರಕಟಿಸಲಾಗಿದೆ.* ಬಿಹಾರದ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಮಿತಿಯ ಸಂಚಾಲಕರಾಗಿ ನೇಮಕವಾಗಿದ್ದಾರೆ.* ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಡಿ ತೆರಿಗೆ ಪ್ರಮಾಣ ಸರಳಗೊಳಿಸಲು ರಚಿಸಿದ್ದ ಏಳು ಸಚಿವರನ್ನು ಒಳಗೊಂಡ ಸಮಿತಿಯನ್ನು ಪುನ‌ರ್ ರಚಿಸಲಾಗಿದೆ.* ಉತ್ತರಪ್ರದೇಶದ ಹಣಕಾಸು ಸಚಿವ ಸುರೇಶ್ ಕುಮಾರ್ ಖನಾ, ಗೋವಾದ ಸಾರಿಗೆಸಚಿವ ಮೌವಿನ್ ಗೊಡಿನ್ಹೋ, ರಾಜಸ್ಥಾನದ ವೈದ್ಯಕೀಯ ಮತ್ತು ಆರೋಗ್ಯ ಸೇವಾ ಸಚಿವ ಗಜೇಂದ್ರ ಸಿಂಗ್, ಪಶ್ಚಿಮ ಬಂಗಾಳದ ಹಣಕಾಸು ಸಚಿವರಾದ ಚಂದ್ರಿಮಾ ಭಟ್ಟಾಚಾರ್ಯ ಮತ್ತು ಕೇರಳದ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಈ ಸಮಿತಿಯ ಉಳಿದ ಸದಸ್ಯರಾಗಿದ್ದಾರೆ.* ಜಿಎಸ್‌ಟಿ ದರ ಸರಳೀಕರಣ, ಯಾವ ವಿಭಾಗಕ್ಕೆ ವಿನಾಯಿತಿ ಸೌಲಭ್ಯ ನೀಡಬೇಕು ಮತ್ತು ಜಿಎಸ್‌ಟಿ ವರಮಾನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ವರದಿ ಸಲ್ಲಿಸುವುದು ಈ ಸಮಿತಿಯ ಜವಾಬ್ದಾರಿಯಾಗಿದೆ. ಸದ್ಯ ಜಿಎಸ್‌ಟಿ ಅಡಿಯಲ್ಲಿ ನಾಲ್ಕು ಹಂತದಲ್ಲಿ ತೆರಿಗೆ ನಿಗದಿಪಡಿ ಸಲಾಗಿದೆ.* ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ 2021ರಲ್ಲಿ ಈ ಸಮಿತಿ ರಚಿಸಲಾಗಿತ್ತು. ಈ ಸಮಿತಿಯು 2022ರ ಜೂನ್‌ನಲ್ಲಿ ಮಧ್ಯಂತರ ವರದಿ ಸಲ್ಲಿಸಿದೆ. ಕಳೆದ ವರ್ಷದ ಸಂಬಂಧಿಸಿದಂತೆ ಅಧ್ಯಯನ ನಡೆಸಿ ವರದಿ ಸಲ್ಲಿಸುವುದು ಈ ಸಮಿತಿಯ ಜವಾಬ್ದಾರಿಯಾಗಿದೆ. ಸದ್ಯ ಜಿಎಸ್‌ಟಿ ಅಡಿಯಲ್ಲಿ ನಾಲ್ಕು ಹಂತದಲ್ಲಿ ತೆರಿಗೆ ನಿಗದಿಪಡಿ ಸಲಾಗಿದೆ.* ಕಳೆದ ವರ್ಷದ ಅಕ್ಟೋಬರ್ ನಲ್ಲಿ ಪುನರ್ ರಚನೆಗೊಂಡಿದ್ದ ಸಮಿತಿಯ ಸಂಚಾಲಕರಾಗಿ ಸುರೇಶ್ ಕುಮಾರ್ ಖನ್ನಾ ನೇಮಕವಾಗಿದ್ದರು.* ಜಿಎಸ್‌ಟಿ ಮಂಡಳಿಯ 53ನೇ ಸಭೆಯು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಅಧ್ಯಕ್ಷತೆಯಲ್ಲಿ ಜೂನ್ 22ರಂದು ನಡೆಯಲಿದೆ.