* ಇದೆ ಮೊದಲ ಬಾರಿಗೆ ಜಮೈಕಾ ಪ್ರಧಾನಿ ಆಂಡ್ರ್ಯೂ ಹೋಲ್ನೆಸ್ ಭಾರತ ಪ್ರವಾಸ ಕೈಗೊಂಡಿದ್ದು ಹೋಲ್ನೆಸ್ ಅವರು ಸೋಮವಾರ (ಸೆ.30) ದಿಲ್ಲಿಗೆ ಆಗಮಿಸಿದ್ದಾರೆ. ಅ.3 ತನಕ ಭಾರತದಲ್ಲಿರಲಿದ್ದಾರೆ.     * ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಒಪ್ಪಂದಗಳಿಗೆ ಅವರು ಸಹಿ ಹಾಕಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಜಮೈಕಾದ ಪ್ರಧಾನಿಯವರ ಭೇಟಿಯ ಸಂದರ್ಭದಲ್ಲಿ ದ್ವಿಪಕ್ಷೀಯ ಸಹಕಾರಕ್ಕೆ ಪೂರಕವಾದ ಹಲವಾರು ತಿಳುವಳಿಕಾ ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ* ಕೆರಿಬಿಯನ್ ದ್ವೀಪ ರಾಷ್ಟ್ರವಾದ ಜಮೈಕಾದೊಂದಿಗೆ ಭಾರತವು ಸ್ವಾತಂತ್ರ್ಯ ಪುರ್ವದಿಂದಲ್ ಸಂಬಂಧವನ್ನು ಹೊಂದಿದೆ.