* ರಾಕೇಶ್ ಶರ್ಮಾ ಅಂತರಿಕ್ಷಯಾನ ಮಾಡಿದ ಪ್ರಪ್ರಥಮ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 1984ರಲ್ಲಿ ಸೋವಿಯತ್ ಬಾಹ್ಯಾಕಾಶ ನೌಕೆ ಸೂಯಜ್ ಟಿ-11ರಲ್ಲಿ ಪ್ರಯಾಣಿಸಿದ್ದ ವಿಂಗ್ ಕಮಾಂಡರ್ ರಾಕೇಶ್ ಶರ್ಮಾ ಬಾಹ್ಯಾಕಾಶದಲ್ಲಿ ಏಳು ದಿನಗಳು 21 ಗಂಟೆ 40 ನಿಮಿಷಗಳ ಕಾಲ ಯಶಸ್ವಿಯಾಗಿ ಕಳೆದು ವಾಪಸ್ ಬರುವ ಮೂಲಕ ದೇಶಕ್ಕೆ ಹೆಮ್ಮೆಯನ್ನು ತಂದಿದ್ದರು.- ರಾಕೇಶ್ ಶರ್ಮಾ ಬಾಹ್ಯಾಕಾಶ ಯಾನ:* ರಾಕೇಶ್ ಶರ್ಮಾ ಅವರು 1949ರ ಜನವರಿ 13ರಂದು ಪಂಜಾಬ್ ಪ್ರಾಂತ್ಯದ ಪಟಿಯಾಲಾ ನಗರದಲ್ಲಿ ಜನಿಸಿದ್ದರು. ಭಾರತೀಯ ವಾಯುಸೇನೆಯಲ್ಲಿ ವೈಮಾನಿಕ ಪರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ಕ್ವಾಡ್ರನ್ ಲೀಡರ್ ರಾಕೇಶ್ ಶರ್ಮಾ ಅವರು 1982ರ ಸೆಪ್ಟೆಂಬರ್ 20ರಂದು ಅಂತರಿಕ್ಷಯಾನಿಯಾಗಿ ಆಯ್ಕೆಯಾಗಿದ್ದರು.* ಅಂತರಿಕ್ಷಯಾನಿ ಆಯ್ಕೆ ಪ್ರಕ್ರಿಯೆಯ ನಂತರ ರಾಕೇಶ್ ಶರ್ಮಾ ಮತ್ತು ವಿಂಗ್ ಕಮ್ಯಾಂಡರ್ ರವೀಶ್ ಮಲ್ಹೊತ್ರಾ ಆಯ್ಕೆಯಾಗಿ ರಷ್ಯಾದ ಯೂರಿ ಗಗಾರಿನ್ ಕೇಂದ್ರದಲ್ಲಿ ಮತ್ತು ಬೆಂಗಳೂರಿನ ಇಸ್ರೋ ಕೇಂದ್ರಗಳಲ್ಲಿ ಅಂತರಿಕ್ಷಯಾನಕ್ಕಾಗಿ ತರಬೇತಿ ಪಡೆದರು. ಕೊನೆಯಲ್ಲಿ ರಾಕೇಶ್ ಶರ್ಮಾರನ್ನು ಅಂತರಿಕ್ಷಯಾನ ಮಾಡುವ ವ್ಯಕ್ತಿ ಮತ್ತು ಅವರ ಬದಲಿ ರವೀಶ್ ಮಲ್ಹೊತ್ರಾ ಎಂದು ನಿರ್ಧರಿಸಲಾಯಿತು. * ಸೋವಿಯತ್ ಗಗನಯಾತ್ರಿ ಯೂರಿ ಮ್ಯಾಲಶೇವ್ ನೇತ್ವತ್ವದಲ್ಲಿ ಹಾಗು ಗೆನಡಿ ಸ್ಟ್ರೆಕಲೋವ್ ಜೊತೆಯಲ್ಲಿ ರಾಕೇಶ್ 3 ಏಪ್ರಿಲ್,1984 ರಂದು ಇಂದಿನ ಕಜಖಸ್ಥಾನದಲ್ಲಿರುವ ಬೈಕನೌರ್ ಅಂತರಿಕ್ಷಾ ಉಡಾವಣಾ ಕೇಂದ್ರದಿಂದ ಹಾರಿದ ಸೋಯಜ್ ಟಿ-11 ಏರಿ ಸಲ್ಯೂಟ್-7 ಅಂತರಿಕ್ಷ ನಿಲ್ದಾಣ ಸೇರಿದರು. * ರಾಕೇಶ್ ಶರ್ಮಾ ಅವರು 35 ವರ್ಷದಲ್ಲಿ ಅಂತರಿಕ್ಷಯಾನ ಮಾಡಿದ ರಾಕೇಶ್ ಸಲ್ಯೂಟ್-7 ಅಂತರಿಕ್ಷ ನಿಲ್ದಾಣದಲ್ಲಿ 8 ದಿನ ಕಳೆದು ಹಲವಾರು ಪ್ರಯೋಗಗಳು ಮತ್ತು ಛಾಯಾಗ್ರಹಣ ನೆಡಸಿದರು. ಈ ಸಾಧನೆಯಿಂದಾಗಿ ಭಾರತ ಅಂತರಿಕ್ಷಯಾನ ಕೈಗೊಂಡ 14 ನೆ ರಾಷ್ಟ್ರ ಮತ್ತು ರಾಕೇಶ್ ಅಂತರಿಕ್ಷಯಾನ ಮಾಡಿದ 138ನೆ ಯಾತ್ರಿ ಎಂಬ ದಾಖಲೆ ಸೃಷ್ಟಿಯಾಯಿತು. * 11 ಏಪ್ರಿಲ್ 1984 ರಂದು ರಾಕೇಶ್ ಸೋಯಜ್ ಟಿ-10 ಏರಿ ಭೂಮಿ ಸೇರಿದರು. ಭಾರತದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅಂತರಿಕ್ಷದಿಂದ ಭಾರತ ಹೇಗೆ ಕಾಣುತ್ತದೆ ಎಂದು ಕೇಳಿದಾಗ ಕವಿ ಮುಹಮ್ಮದ್ ಇಕ್ಬಾಲರ ಸಾರೆ ಜಹಾಂ ಸೆ ಅಚ್ಛಾ ಹಿಂದೂಸ್ಥಾನ್ ಹಮಾರಾ (ಎಲ್ಲಾ ನಾಡಿಗಿಂತ ಹಿಂದೂಸ್ಥಾನ ಶ್ರೇಷ್ಟ) ಕವಿತೆಯ ಸಾಲುಗಳನ್ನು ರಾಕೇಶ್ ವಾಚಿಸಿದ ಪ್ರಸಂಗ ಬಹು ಜನಪ್ರಿಯವಾಯಿತು.* ತಮ್ಮ ಸಾಧನೆಗಾಗಿ 1985ರಲ್ಲಿ ಭಾರತ ಸರ್ಕಾರದಿಂದ ರಾಕೇಶ್ ಅಶೋಕ ಚಕ್ರ ಪದಕ ಪಡೆದರು. ಯಾನದ ನಂತರ ವಾಯುಸೇನಾ ಪಡೆಯಿಂದ ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್)ಸೇರಿ ಪರೀಕ್ಷಕ ವೈಮಾನಿಕರಾಗಿ ಕಾರ್ಯ ನಿರ್ವಹಿಸಿದರು. ಕೊನೆಯಲ್ಲಿ ವಿಂಗ್ ಕಮ್ಯಾಂಡರ್ ಹುದ್ದೆ ಅಲಂಕರಿಸಿ, 2001ರಲ್ಲಿ ರಾಕೇಶ್ ಎಚ್ಎಎಲ್ ನಿಂದ ನಿವೃತ್ತರಾದರು.