Job Description: * ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆ ಬಿಡುಗಡೆ ಮಾಡಿರುವ ಜನಪ್ರಿಯ ಜಾಗತಿಕ ನಾಯಕರ ಅನುಮೋದನೆ ರೇಟಿಂಗ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಮೊದಲ ಸ್ಥಾನ ಪಡೆದಿದ್ದು, ನಂತರದ ಸ್ಥಾನದಲ್ಲಿ ಮೆಕ್ಸಿಕೋ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಶೇಕಡಾ 61 ರೇಟಿಂಗ್ ಪಡೆದು ದ್ವಿತೀಯ ಸ್ಥಾನದಲ್ಲಿದ್ದಾರೆ ಹಾಗೂ ಆಸ್ಟ್ರೇಲಿಯಾದ ಪ್ರಧಾನಿ ಯಾ೦ಟನಿ ಆಲ್ಬನಿಸ್ ಶೇ. 55 ರಷ್ಟು ರೇಟಿಂಗ್ ನೊಂದಿಗೆ 3 ನೇ ಸ್ಥಾನ ಪಡೆದಿದ್ದಾರೆ.* ಮಾರ್ಚ್ 22 ರಿಂದ 28 ರ ವರೆಗೆ ಸಂಗ್ರಹಿಸಿರುವ ದತ್ತಾಂಶಗಳ ಆಧಾರದಲ್ಲಿ ಸಮೀಕ್ಷೆ ನಡೆಸಲಾಗಿದ್ದು, 22 ನಾಯಕರ ಪಟ್ಟಿಯಲ್ಲಿ ದಕ್ಷಿಣ ಕೊರಿಯಾದ ಅಧ್ಯಕ್ಷ ಯುನ್ ಸೂಕ್ ಯೋಲ್ ರವರು ಕೊನೆಯ ಸ್ಥಾನದಲ್ಲಿದ್ದಾರೆ.