* ಭಾರತದಲ್ಲಿ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಇದನ್ನು 2008 ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮತ್ತು ಭಾರತ ಸರ್ಕಾರವು ಭಾರತೀಯ ಸಮಾಜದಲ್ಲಿ ಮಹಿಳೆಯರು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕ ಜಾಗೃತಿಯನ್ನು ಹರಡಲು ಪ್ರಾರಂಭಿಸಿತು.* ಹೆಣ್ಣು ಮಕ್ಕಳ ಹಕ್ಕುಗಳು ಮತ್ತು ಶಿಕ್ಷಣ, ಆರೋಗ್ಯ ಮತ್ತು ಪೌಷ್ಟಿಕಾಂಶದ ಮಹತ್ವ ಸೇರಿದಂತೆ ಹಲವು ವಿಚಾರಗಳ ಬಗೆಗೆ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲು ಮುಂದಾಯಿತು.* ಇದರ ಮೂಲಕ ಹೆಣ್ಣು ಶಿಶುಹತ್ಯೆ, ಲಿಂಗ ಅಸಮಾನತೆ, ದೈಹಿಕ ದೌರ್ಜನ್ಯ ಮುಂತಾದ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಹೆಣ್ಣುಮಕ್ಕಳ ಶಿಕ್ಷಣದ ಮಹತ್ವ, ಅವರ ಆರೋಗ್ಯ ಮತ್ತು ಪೌಷ್ಟಿಕತೆಯ ಪ್ರಾಮುಖ್ಯತೆಯನ್ನು ಉತ್ತೇಜಿಸುವ ಉದ್ದೇಶವೂ ಇದಾಗಿದೆ. * 2025ರಲ್ಲಿ ಕರ್ನಾಟಕ ಸರ್ಕಾರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಜನವರಿ 24ರಂದು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣುಮಕ್ಕಳಿಗೆ ವಿಶೇಷ ಉಡುಗೊರೆ ನೀಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. * ಹೆಣ್ಣುಮಕ್ಕಳ ದಿನಾಚರಣೆ ಸಮಾಜದಲ್ಲಿ ಹೆಣ್ಣುಮಕ್ಕಳಿಗೆ ಸಮಾನ ಹಕ್ಕುಗಳು, ಶಿಕ್ಷಣ ಮತ್ತು ಆರೋಗ್ಯದ ಮಹತ್ವವನ್ನು ಒತ್ತಿ ಹೇಳುತ್ತದೆ. ಇದು ಹೆಣ್ಣುಮಕ್ಕಳ ಮೇಲಿನ ಕಾಳಜಿ ಮತ್ತು ಗೌರವವನ್ನು ಹೆಚ್ಚಿಸಲು ಪ್ರೇರಣೆ ನೀಡುತ್ತದೆ.* ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಮಹತ್ವ:-ಹೆಣ್ಣು ಮಕ್ಕಳ ಹಕ್ಕುಗಳ ಜಾಗೃತಿ: ಹೆಣ್ಣು ಮಕ್ಕಳ ಹಕ್ಕುಗಳನ್ನು ಗೌರವಿಸುವುದು, ಅವರ ಹಕ್ಕುಗಳನ್ನು ಕಾಪಾಡುವುದು ಮತ್ತು ಸಮಾನ ಅವಕಾಶಗಳನ್ನು ಒದಗಿಸುವುದು.- ಶಿಕ್ಷಣ ಮತ್ತು ಆರೋಗ್ಯ: ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು ಒದಗಿಸುವುದು, ಅವರ ಸಮಗ್ರ ಅಭಿವೃದ್ಧಿಗೆ ಸಹಾಯ ಮಾಡುತ್ತದೆ.- ಪೋಷಣೆ: ಹೆಣ್ಣು ಮಕ್ಕಳ ಪೋಷಣೆಯ ಪ್ರಾಮುಖ್ಯತೆಯನ್ನು ಒತ್ತಿ ಹೇಳುವುದು, ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಲು.