* ರಾಜ್ಯದಲ್ಲಿ ಕೋವಿಡ್‌ನ ಜೆಎನ್-1 ರೂಪಾಂತರಿ ಸೋಂಕು ಹೆಚ್ಚಳವಾಗುತ್ತಿರುವುದರಿಂದ ರಾಜ್ಯದಲ್ಲಿ ಮತ್ತೆ ಲಸಿಕೆ ಅಭಿಯಾನ ಶುರುವಾಗುತ್ತಿದೆ. ಕೇಂದ್ರ ಸರಕಾರದ ಸೂಚನೆಯಂತೆ ಜನವರಿ.2ರಿಂದ ರಾಜ್ಯದಲ್ಲಿ ಕೋರ್ಬಿವ್ಯಾಕ್ಸ್ ಲಸಿಕೆ ನೀಡಲು ಸರಕಾರ ಮುಂದಾಗಿದೆ. * ರಾಜ್ಯದಲ್ಲಿ ಮುನ್ನೆಚ್ಚರಿಕಾ ಲಸಿಕೆಯನ್ನು ಶೇ.27 ಜನರು ಮಾತ್ರ. ಪಡೆದಿದ್ದಾರೆ. ರಾಜ್ಯದಲ್ಲಿ ಈವರೆಗೂ 1.5 ಕೋಟಿಗೂ ಹೆಚ್ಚು ಮಂದಿ 3ನೇ ಡೋಸ್ ಲಸಿಕೆ ಪಡೆದಿಲ್ಲ. ಈ ಹಿನ್ನೆಲೆಯಲ್ಲಿ ಈಗ ಮತ್ತೆ ಮುನ್ನೆಚ್ಚರಿಕಾ ಲಸಿಕೆ ನೀಡಲಾಗುವುದು. ಪ್ರಾಥಮಿಕ ಹಂತದಲ್ಲಿ 30 ಸಾವಿರ ಕೋರ್ಬಿವಾಕ್ಸ್‌ ಲಸಿಕೆ ಖರೀದಿಗೆ ಸರಕಾರ ಮುಂದಾಗಿದೆ.* ಒಂದಕ್ಕಿಂತ ಹೆಚ್ಚು ಆರೋಗ್ಯ ಸಮಸ್ಯೆ ಹಾಗೂ ಗಂಭೀರ ಆರೋಗ್ಯ ಸಮಸ್ಯಯಿಂದ ಬಳಲುತ್ತಿರುವವರು ಮೂರನೇ ಡೋಸ್ ಪಡೆಯವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.