➤ ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ, ನಟ ಮತ್ತು ಸಾಹಿತಿ ಜೋ ಸೈಮನ್ (80) ಅವರು ಶುಕ್ರವಾರ (13-02-2026) ಸಂಜೆ ಬೆಂಗಳೂರಿನಲ್ಲಿ ನಿಧನರಾದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (KFCC) ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.➤ ಜೋ ಸೈಮನ್ ಅವರ ಬಹುಮುಖ ಪ್ರತಿಭೆ: ಸ್ಯಾಂಡಲ್‌ವುಡ್‌ನಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿದ ಜೋ ಸೈಮನ್ ಅವರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.- ನಿರ್ದೇಶನ: ಸಾಹಸ ಸಿಂಹ ವಿಷ್ಣುವರ್ಧನ್ ಅಭಿಯಿನದ ಸೂಪರ್ ಹಿಟ್ ಸಿನಿಮಾ 'ಸಾಹಸ ಸಿಂಹ' ಸೇರಿದಂತೆ 'ಸ್ನೇಹದ ಕಡಲಲ್ಲಿ', 'ಸಿಂಹ ಜೋಡಿ', 'ಮಿಸ್ಟರ್ ವಾಸು', 'ವಾಂಟೆಡ್' ಮತ್ತು 'ರವಿವರ್ಮ' ಅಂತಹ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.- ನಟನೆ ಹಾಗೂ ಸಾಹಿತ್ಯ: ಕೇವಲ ನಿರ್ದೇಶನ ಮಾತ್ರವಲ್ಲದೆ, ನಟರಾಗಿ ಹಾಗೂ ಗೀತರಚನೆಕಾರರಾಗಿಯೂ ಅವರು ಗುರುತಿಸಿಕೊಂಡಿದ್ದರು. ಇವರ ಕಥೆ ಮತ್ತು ಚಿತ್ರಕಥೆಗಳು ಕಮರ್ಷಿಯಲ್ ಅಂಶಗಳಿಂದ ಕೂಡಿರುತ್ತಿದ್ದವು.➤ ಜೋ ಸೈಮನ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ. "ಕನ್ನಡ ಚಿತ್ರರಂಗ ಒಬ್ಬ ಹಿರಿಯ ಮಾರ್ಗದರ್ಶಕನನ್ನು ಕಳೆದುಕೊಂಡಿದೆ. ಅವರ ಬಹುಮುಖ ಪ್ರತಿಭೆ ಮತ್ತು ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ" ಎಂದು ಅವರು ಕಂಬನಿ ಮಿಡಿದಿದ್ದಾರೆ.