Job Description: ➤ ಜಾಗತಿಕ ಮಟ್ಟದಲ್ಲಿ ಪ್ರತಿ ವರ್ಷ ಜೂನ್ 26 ರಂದು ಮಾದಕ ವಸ್ತುಗಳ ದುರ್ಬಳಕೆ ಮತ್ತು ಅದರ ಅಕ್ರಮ ಕಳ್ಳಸಾಗಣೆಯನ್ನು ತಡೆಯಲು ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ➤ ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನದ 2026 ರ ಥೀಮ್ ""ವಿಶ್ವದ ಮಾದಕವಸ್ತು ಸಮಸ್ಯೆ: ಮುಂದುವರಿಯುತ್ತಿರುವ ಸವಾಲುಗಳು, ಹೊಸ ಅಡೆತಡೆಗಳು ಮತ್ತು ನವೀನ ಪ್ರತಿಕ್ರಿಯೆಗಳು" (“World drug problem: persisting issues, new challenges, innovative responses”)" ಎಂದು ಥೀಮ್ ಆಗಿದೆ.➤ ಪ್ರತಿ ವರ್ಷ ಜೂನ್ 26 ರಂದು ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಿಸಲು ಕ್ರಮ ಮತ್ತು ಸಹಕಾರವನ್ನು ಬಲಪಡಿಸಲು ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನವನ್ನು ಆಚರಿಸಲಾಗುತ್ತದೆ.➤ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನವನ್ನು 1987 ಡಿಸೆಂಬರ್‌ 7ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜೂನ್‌ 26 ಎಂದು ಘೋಷಿಸಲಾಯಿತು. ➤ ತಡೆಗಟ್ಟುವಿಕೆ ಮತ್ತು ನಮ್ಮ ಜವಾಬ್ದಾರಿ- ಮಾದಕವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತೊಗೆಯಲು ಕಠಿಣ ಕಾನೂನುಗಳಷ್ಟೇ ಸಾಲದು, ಅದಕ್ಕೆ ಸಾಮೂಹಿಕ ಪ್ರಯತ್ನದ ಅಗತ್ಯವಿದೆ:- ಜಾಗೃತಿ ಮತ್ತು ಶಿಕ್ಷಣ: ಶಾಲೆ, ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳಿಗೆ ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ನಿರಂತರ ಅರಿವು ಮೂಡಿಸಬೇಕು.- ಕುಟುಂಬದ ಪಾತ್ರ: ಪೋಷಕರು ತಮ್ಮ ಮಕ್ಕಳ ನಡವಳಿಕೆಗಳ ಮೇಲೆ ಗಮನ ಹರಿಸಬೇಕು ಮತ್ತು ಅವರಿಗೆ ಆತ್ಮವಿಶ್ವಾಸದ ವಾತಾವರಣವನ್ನು ನಿರ್ಮಿಸಿಕೊಡಬೇಕು.- ಸಹಾನುಭೂತಿ ಮತ್ತು ಪುನರ್ವಸತಿ: ಮಾದಕ ವ್ಯಸನಕ್ಕೆ ತುತ್ತಾದವರನ್ನು ಅಪರಾಧಿಗಳಂತೆ ನೋಡದೆ, ಅವರನ್ನು ಪ್ರೀತಿಯಿಂದ ನಡೆಸಿ ಸೂಕ್ತ ಕೌನ್ಸೆಲಿಂಗ್ ಹಾಗೂ ಪುನರ್ವಸತಿ ಕೇಂದ್ರಗಳ ಮೂಲಕ ಮುಖ್ಯವಾಹಿನಿಗೆ ತರಬೇಕು.