* ಜಾಗತಿಕ ಮಟ್ಟದಲ್ಲಿ ಪ್ರತಿ ವರ್ಷ ಜೂನ್ 26 ರಂದು ಮಾದಕ ವಸ್ತುಗಳ ದುರ್ಬಳಕೆ ಮತ್ತು ಅದರ ಅಕ್ರಮ ಕಳ್ಳಸಾಗಣೆಯನ್ನು ತಡೆಯಲು ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. * ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನದ 2025 ರ ಥೀಮ್ "ಸರಪಳಿಗಳನ್ನು ಮುರಿಯುವುದು: ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ಎಲ್ಲರಿಗೂ ಚೇತರಿಕೆ!" ಎಂದು ಥೀಮ್ ಆಗಿದೆ.* ಪ್ರತಿ ವರ್ಷ ಜೂನ್ 26 ರಂದು ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಿಸಲು ಕ್ರಮ ಮತ್ತು ಸಹಕಾರವನ್ನು ಬಲಪಡಿಸಲು ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನವನ್ನು ಆಚರಿಸಲಾಗುತ್ತದೆ.* ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನವನ್ನು 1987 ಡಿಸೆಂಬರ್ 7ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜೂನ್ 26 ಎಂದು ಘೋಷಿಸಲಾಯಿತು.