* ಮಂಡ್ಯದಲ್ಲಿ ಜೂನ್ 7, 8 ಮತ್ತು 9ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.* ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, 'ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಸಮ್ಮೇಳನ ಹಮ್ಮಿಕೊಳ್ಳಬೇಕು' ಎಂದು ಸಲಹೆ ನೀಡಿದರು.* 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಮಹೇಶ ಜೋಶಿ ಮಾತನಾಡಿ ಈ ಸಮ್ಮೇಳನದಲ್ಲಿ ಸಮ್ಮೇಳನದಲ್ಲಿ ಕನ್ನಡ ರಥ ಜಾಥಾ 87 ಸಾಧಕರಿಗೆ ಸನ್ಮಾನ  ಮೂರು ದಿನ ವಿಚಾರಗೋಷ್ಠಿ ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.* ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 30 ಕೋಟಿ ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ*  ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಮಂಡ್ಯದ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ,  ಕನ್ನಡ ಮತ್ತು ಸಂಸ್ಕೃತ ಸಚಿವ ಶಿವರಾಂ ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್, ಮಹೇಶ್ ಜೋಶಿ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದ್ದರು.