* ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರು ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಜೂನ್ 9 (ಭಾನುವಾರ)ರಂದು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. * ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಮುಯಿಜು ಅವರು ಮಾತ್ರವಲ್ಲದೇ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾದ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್, ಹಾಗೂ ಭೂತಾನ್ ರಾಜ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಸೇರಿದಂತೆ ದಕ್ಷಿಣ ಏಷ್ಯಾದ ಗಣ್ಯಾತಿಗಣ್ಯರು ಹಾಗೂ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.* ಕಳೆದ ವರ್ಷದ ನವೆಂಬರ್‌ನಲ್ಲಿ ಮುಯಿಜು ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಾಲ್ಡಿವ್ಸ್ ಮತ್ತು ಭಾರತದ ನಡುವಿನ ರಾಜತಾಂತ್ರಿಕ ಸಂಬಂಧದಲ್ಲಿ ಬಿಕ್ಕಟ್ಟು ತಲೆದೂರಿತ್ತು.