* 2023ರ ಜೂನ್ 22ರಂದು ಅಮೆರಿಕ ಪ್ರವಾಸ ಕೈಗೊಳ್ಳುತ್ತಿರುವ ಪ್ರಧಾನಿ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬಿಡೆನ್ ಆತಿಥ್ಯ ನೀಡಲಿದ್ದಾರೆ. * ಶಿಕ್ಷಣದಿಂದ ಹಿಡಿದು ಹವಾಮಾನ ಬದಲಾವಣೆ ಸಮಸ್ಯೆಗಳ ಕುರಿತು ಮೋದಿ-ಬಿಡೆನ್ ನಡುವೆ ಚರ್ಚೆ, ಈ ಭೇಟಿಯು ಮುಕ್ತ, ಸಮೃದ್ಧ ಮತ್ತು ಸುರಕ್ಷಿತ ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ಉಭಯ ದೇಶಗಳ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದು ಶ್ವೇತಭವನ ಹೊರಡಿಸಿದ ಅಧಿಕೃತ ಹೇಳಿಕೆ ತಿಳಿಸಿದೆ.* ರಕ್ಷಣೆ, ಶುದ್ಧ ಇಂಧನ ಮತ್ತು ಬಾಹ್ಯಾಕಾಶ ಸೇರಿದಂತೆ ನಮ್ಮ ಕಾರ್ಯತಂತ್ರದ ತಂತ್ರಜ್ಞಾನ ಪಾಲುದಾರಿಕೆಯನ್ನು ಹೆಚ್ಚಿಸವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.