* ಐಎಎಸ್ ಅಧಿಕಾರಿ ಗೋವಿಂದ ರೆಡ್ಡಿ ಅವರನ್ನು ಕೆ-ರೈಡ್‌ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.* ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯಲ್ಲಿ ಪ್ರಸ್ತುತ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ 2013 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಗೋವಿಂದ್ ರೆಡ್ಡಿ ಅವರು, ಕೆ-ರೈಡ್‌ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಸೋಮವಾರ ಹೊರಡಿಸಲಾದ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.* ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ(ಕರ್ನಾಟಕ) ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಮಂಜುಳಾ ಎನ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಗೋವಿಂದ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.* ಕೆ.ರೈಡ್‌ನ ಪ್ರಮುಖ ಬೆಂಗಳೂರು ಉಪನಗರ ರೈಲ್ವೆ ಯೋಜನೆ(ಬಿಎಸ್‌ಆರ್‌ಪಿ) ಕಾಮಗಾರಿ ಗುತ್ತಿಗೆಯನ್ನು ಎಲ್‌ ಆ್ಯಂಡ್‌ ಟಿ ಕಂಪನಿ ರದ್ದುಪಡಿಸಿದ ಬೆನ್ನಲ್ಲೇ ಈ ನೇಮಕಾತಿ ನಡೆದಿದೆ.* ಜುಲೈ 31 ರಂದು, ಅಗತ್ಯ ಭೂಮಿ ಹಸ್ತಾಂತರಕ್ಕೆ ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ(ಕೆ-ರೈಡ್) ತೋರಿದ ನಿರ್ಲಕ್ಷ್ಯವೇ ಕೆಲಸ ಸ್ಥಗಿತಕ್ಕೆ ಕಾರಣ ಎಂದು ಕಂಪನಿ ದೂರಿದ್ದರೆ, ಎಲ್‌ ಆ್ಯಂಡ್‌ ಟಿ ಸಮರ್ಪಕವಾಗಿ ಕೆಲಸ ಮಾಡದೆ ಕಾನೂನು ಬಾಹಿರವಾಗಿ ಗುತ್ತಿಗೆಯಿಂದ ಹಿಂದೆ ಸರಿದಿದೆ ಎಂದು ಕೆ-ರೈಡ್‌ ಹೇಳುತ್ತಿದೆ.