* ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಪ್ರತಿಷ್ಠಿತ 'Golden Book of World Records'ನಲ್ಲಿ ದಾಖಲಾಗಿದ್ದು, ಇತಿಹಾಸ ನಿರ್ಮಿಸಿದೆ. ಇದು ನಾಡಿಗೆ ಹೆಮ್ಮೆಯ ಕ್ಷಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.* ಜೂನ್ 11, 2023 ರಿಂದ ಜುಲೈ 25, 2025ರ ಅವಧಿಯಲ್ಲಿ 500 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ.* ಉದ್ಯೋಗ, ಶಿಕ್ಷಣ, ವೈದ್ಯಕೀಯ ಸೇವೆಗಾಗಿ ಸಂಚರಿಸುವ ತಾಯಿ-ಅಕ್ಕ-ತಂಗಿಯರ ಶ್ರಮ ಈ ಸಾಧನೆಯ ಶ್ರೇಯ ಎಂದು ಅವರು ತಿಳಿಸಿದ್ದಾರೆ. ಶಕ್ತಿ ಯೋಜನೆಯು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲಗೊಳಿಸಿದೆ ಎಂದಿದ್ದಾರೆ.* 500 ಕೋಟಿ ಪ್ರಯಾಣದ ದಾಖಲೆ ಹೆಮ್ಮೆಯ ಸಂಗತಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಯೋಜನೆಯನ್ನು ಯಶಸ್ವಿಗೊಳಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಾರ್ಮಿಕ ಮುಖಂಡರಿಗೆ ಧನ್ಯವಾದ ಸಲ್ಲಿಸಿದ್ದಾರೆ.* ಶಕ್ತಿ ಯೋಜನೆಯ ಹಾದಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 5800 ಹೊಸ ಬಸ್ಗಳು, 10,000 ಹೊಸ ನೇಮಕಾತಿ, ಹಾಗೂ 2000 ಕೋಟಿ ಸಾಲ ಪರಿಹಾರ ಒದಗಿಸಲಾಗಿದೆ. ಪ್ರಯಾಣಿಕರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡಿದೆ.* Beyond Free Rides ಅಧ್ಯಯನದ ಪ್ರಕಾರ, ಶಕ್ತಿ ಯೋಜನೆಯಿಂದ ಬೆಂಗಳೂರು (23%) ಮತ್ತು ಹುಬ್ಬಳ್ಳಿ-ಧಾರವಾಡ (21%) ಮಹಿಳಾ ಉದ್ಯೋಗಿಗಳ ಸಂಖ್ಯೆ ಹೆಚ್ಚಾಗಿದೆ. ಇದರಿಂದ ರಾಜ್ಯದ ತಲಾ ಆದಾಯ ಏರಿಕೆಯಾಗಿದೆ.* ಶಕ್ತಿ ಯೋಜನೆ ದೇಶದ ಮಹಿಳಾ ಸಬಲೀಕರಣದ ದಿಟ್ಟ ಹೆಜ್ಜೆಯಾಗಿದ್ದು, ವಿಶ್ವದಾಖಲೆ ಸೇರಿಕೊಂಡಿರುವುದು ಕರ್ನಾಟಕಕ್ಕೆ ಹೆಮ್ಮೆ ತಂದಿದೆ.