* ಮಾನವ-ವನ್ಯಜೀವಿ ಸಂಘರ್ಷವನ್ನು ತಗ್ಗಿಸಲು ಮತ್ತು ಸಂಘರ್ಷವನ್ನು ಕಡಿಮೆ ಮಾಡಲು ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನವನ್ನು (ಎಸ್‌ಒಪಿ) ರೂಪಿಸಲು ಬೆಂಗಳೂರು ಚಾರ್ಟರ್ ಅನ್ನು ಆಗಸ್ಟ್ 12ರಂದು ಮಾನವ-ಆನೆ ಸಂಘರ್ಷ ನಿರ್ವಹಣೆ-2024 ಕುರಿತ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಅಂಗೀಕರಿಸಲಾಯಿತು.* ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ನೀಡಬೇಕಿರುವ  ₹1,000 ಕೋಟಿ ಕಾಂಪಾ (ಅರಣೀಕರಣ ಪರಿಹಾರ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ) ನಿಧಿಯನ್ನು ಬಿಡುಗಡೆ ಮಾಡಬೇಕೆಂದು, ಮಾನವ ಮತ್ತು ವನ್ಯಜೀವಿ ಸಂಘರ್ಷ ನಿರ್ವಹಣೆಗೆ ನೆರವು ನೀಡಲು ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ನಿಯೋಗ ನೀಡಲು ವಿವಿಧ ರಾಜ್ಯಗಳ ಅರಣ್ಯ ಸಚಿವರ ಸಭೆ ನಿರ್ಣಯ ಕೈಗೊಂಡಿದೆ.* ಆಗಸ್ಟ್ 12ರಂದು ಆಯೋಜಿಸಿದ್ದ ಮಾನವ ಮತ್ತು ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಅರಣ್ಯ ಸಚಿವ ಈಶ್ವರ ಬಿ. 'ಖಂಡ್ರೆ ನೇತೃತ್ವದಲ್ಲಿ ನಡೆದ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಜಾರ್ಖಂಡ್ ರಾಜ್ಯಗಳ ಅರಣ್ಯ ಸಚಿವರ ಸಭೆಯಲ್ಲಿ ಈ ನಿರ್ಣಯಕ್ಕೆ ಭಾಗಿಯಾಗಿದ್ದರು.* ಆನೆಗಳು ನಾಡಿಗೆ ಬರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಉತ್ತಮ ಸಾಧನವಾಗಿದೆ. ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಬರಬೇಕಾಗಿರುವ ಕಾಂಪಾ ಹಣವನ್ನೇ ಕೇಂದ್ರ ಸರ್ಕಾರ ನೀಡುತ್ತಿಲ್ಲ ಎಂದು ಈಶ್ವರ ಖಂಡ್ರೆ ಬೇಸರ ವ್ಯಕ್ತಪಡಿಸಿದರು.* 10 ವರ್ಷಗಳಲ್ಲಿ ಮಾನವ-ಆನೆ ಸಂಘರ್ಷದ 2,500ಕ್ಕೂ ಹೆಚ್ಚು ಘಟನೆಗಳು ವರದಿಯಾಗಿವೆ. 350ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಸಾವಿನ ಪ್ರಮಾಣವನ್ನು ಶೂನ್ಯಕ್ಕೆ ತರಲು 'ಸಾಮರಸ್ಯ' ಯೋಜನೆ ರೂಪಿಸಲಾಗುತ್ತಿದೆ.* ಆನೆ ಸಂಘರ್ಷವನ್ನು ತಪ್ಪಿಸಲು ಕಾರ್ಯ- ತಂತ್ರವನ್ನು ರೂಪಿಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಕಾಡಂಚಿನ ರೈತರಿಗೆ ಕಿರುಕುಳ ನೀಡುವ ಕೆಲಸಗಳನ್ನು ಮಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು.