* ದೇಶದ ಒಟ್ಟು ಇಂಧನ ಬಳಕೆಯಲ್ಲಿ ಜೈವಿಕ ಇಂಧನದ ಬಳಕೆ ಪ್ರಮಾಣವನ್ನು ಈ ವರ್ಷದ ಅಕ್ಟೋಬರ್ ವೇಳೆಗೆ ಶೇ 20ರಷ್ಟಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಇದನ್ನು ಈ ಗಡುವಿಗಿಂತ ಮುನ್ನವೇ ಸಾಧಿಸಲಿದ್ದೇವೆ' ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ತಿಳಿಸಿದರು.* ಜಗತ್ತಿನ ಒಟ್ಟಾರೆ ಇಂಧನ ಬೇಡಿಕೆಯ ಶೇ 25ರಷ್ಟು ಭಾರತದಿಂದಲೇ ಬರುತ್ತದೆ. ಈ ಇಂಧನದ ಬಳಕೆ ಮುಂದಿನ ವರ್ಷಗಳಲ್ಲಿ ಇನ್ನಷ್ಟು ಹೆಚ್ಚಲಿದೆ. ಭವಿಷ್ಯದ ಬೇಡಿಕೆಗಳನ್ನು ಪೂರೈಸಲು ಈಗಿನಿಂದಲೇ ಯೋಜನೆಗಳನ್ನು ರೂಪಿಸಿಕೊಳ್ಳಬೇಕಿದೆ. ಅದಕ್ಕೆ ನಾವು ಸಮರ್ಥವಾಗಿರಬೇಕು ಎಂದು ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ತಿಲಿಸಿದರು.* ಯುರೋಪ್ ದೇಶಗಳಿಂದ ಪ್ರತಿದಿನ 13 ಮಿಲಿಯನ್ ಬ್ಯಾರೆಲ್ ಕಚ್ಚಾತೈಲ ಮಾರುಕಟ್ಟೆಗೆ ಬರುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗೆ ದಿನೇ ದಿನೇ ಹೆಚ್ಚು ಹೆಚ್ಚು ಕಚ್ಚಾತೈಲ ಪೂರೈಕೆ ಆಗುತ್ತಿದೆ. * ನಿವ್ವಳ ಇಂಗಾಲ ಹೊರಸೂಸುವಿಕೆ ಪ್ರಮಾಣವನ್ನು 2070ರೊಳಗೆ ಶೂನ್ಯಕ್ಕೆ ಇಳಿಸುವ ಗುರಿ ನಿಗದಿಪಡಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲೋತ್ಪನ್ನ ಕಂಪನಿಗಳು 2040ರೊಳಗೆ ಈ ಗುರಿ ತಲುಪಲು ತಯಾರಿ ಮಾಡಿಕೊಂಡಿವೆ’ ಎಂದರು.* ದೇಶದಲ್ಲಿ ವರ್ಷಕ್ಕೆ 260-270 ಮಿಲಿಯನ್ ಮೆಟ್ರಿಕ್ ಟನ್ ಇಂಧನ ಸಂಸ್ಕರಣೆ ಸಾಮರ್ಥ್ಯ ಹೊಂದಲಾಗಿದೆ. ಬ್ರೆಜಿಲ್ 3 ಮಿಲಿಯನ್ ಬ್ಯಾರೆಲ್ ಪ್ರತಿದಿನ ಉತ್ಪಾದನೆ ಮಾಡುತ್ತಿದೆ. ಸುರಿನಾಮ್, ಗಯಾನಾ, ಕೆನಡಾ ಕೂಡ ಕಚ್ಚಾತೈಲ ಉತ್ಪಾದನೆ ಮಾಡುತ್ತಿವೆ.